ಚಿಕ್ಕಮಗಳೂರು | ಲೈಂಗಿಕ ದೌರ್ಜನ್ಯ: ಆರೋಪಿಗೆ 20ವರ್ಷ ಜೈಲು ಶಿಕ್ಷೆ 

Date:

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಜಯಪುರ ಪೊಲೀಸ್ ಠಾಣೆಯಲ್ಲಿ 2025ರ ಮಾರ್ಚ್ 26ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದ ಕರೆಮನೆ ನಿವಾಸಿ ಸಂತೋಷ್ ಕೆ.ಎಸ್. (31) ಎಂಬಾತನ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ. ಇದಲ್ಲದೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011ರಡಿ ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ಧನ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ

ಪ್ರಕರಣದ ತನಿಖೆಯನ್ನು ಅಂದಿನ ಕೊಪ್ಪ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಮಂಜು ಜೆ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ಪ್ರಕರಣದ ತನಿಖಾ ಸಹಾಯಕರಾಗಿ ಸಿ.ಎಚ್.ಸಿ. ತಿಪ್ಪೇಶ್ ಹಾಗೂ ನ್ಯಾಯಾಲಯದ ಕರ್ತವ್ಯವನ್ನು ಸಿ.ಪಿ.ಸಿ. ಆಕಾಶ್ ನಿರ್ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...