ಚಿಕ್ಕಮಗಳೂರು | ಮಂತ್ರಿಗಿರಿ ಪಟ್ಟಿಯಲ್ಲಿ ಶಾಂತೇಗೌಡ; ನಿರಾಸೆಯಾಗಿದ್ದೇಕೆ? 

Date:

2023ರ ವಿಧಾನಸಭಾ ಚುನಾವಣೆಯಲ್ಲಿ ಸುದೀರ್ಘ 24 ವರ್ಷಗಳ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌ಗೆ, ಇದೀಗ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ಭಾರಿ ಬೇಸರ ಮೂಡಿಸಿದೆ. ಕಾಫಿನಾಡಿನ ಶಾಸಕರಿಗೆ ಈ ಬಾರಿಯೂ ಸೂಕ್ತ ಮನ್ನಣೆ ಸಿಗದಿರುವುದು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಹೈಕಮಾಂಡ್‌ನಿಂದ ರವಾನೆಯಾಗಿದ್ದ ನೂತನ ಸಚಿವರ ಪಟ್ಟಿಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಹೆಸರು ಸೇರ್ಪಡೆಯಾಗಿತ್ತು. ವಿಧಾನ ಪರಿಷತ್‌ ಉಪಸಭಾಪತಿ ಪ್ರಾಣೇಶ್ ವಿರುದ್ಧ ಸುದೀರ್ಘ ಕಾನೂನು ಹೋರಾಟ ನಡೆಸಿ, ಕಳೆದ ಶುಕ್ರವಾರವಷ್ಟೇ ಹೈಕೋರ್ಟ್‌ನಲ್ಲಿ ತಮ್ಮ ಗೆಲುವನ್ನು ಅಧಿಕೃತಗೊಳಿಸಿಕೊಂಡಿದ್ದ ಗಾಯತ್ರಿ ಶಾಂತೇಗೌಡ  ಇನ್ನೂ ಎಂಎಲ್‌ಸಿಯಾಗಿ ಪ್ರಮಾಣವಚನ ಸ್ವೀಕರಿಸಿಲ್ಲದಿದ್ದರು ಸಚಿವ ಸ್ಥಾನದ ಪಟ್ಟಿಯಲ್ಲಿ ಹೆಸರು ಘೋಷಣೆಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಅಚ್ಚರಿ ಮೂಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಾಜಿ ಸಿಎಂ ಸಿದ್ದರಾಮಯ್ಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಗಾಯತ್ರಿ ಶಾಂತೇಗೌಡ ಅವರ ಸಚಿವ ಸ್ಥಾನ ಖಚಿತವಾದ ಬೆನ್ನಲ್ಲೇ ಅವರ ಬೆಂಬಲಿಗರು ಹಾಗೂ ಜಿಲ್ಲಾ ಕೇಂದ್ರದ ಪ್ರಮುಖ ಮುಖಂಡರು ಸಂಭ್ರಮದಿಂದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಧಾನಿ ಬೆಂಗಳೂರಿಗೆ ತೆರಳಿದ್ದರು. ಆದರೆ, ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾಂಗ್ರೆಸ್ ಅಂಗಳದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಇಡೀ ಚಿತ್ರಣವನ್ನೇ ಬದಲಿಸಿದವು. ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದ ಲಕ್ಷ್ಮಿ ಹೆಬ್ಬಾಳ್ಳರ್ ಹಾಗೂ ಉಮಾಶ್ರೀ ಅವರು ವ್ಯಕ್ತಪಡಿಸಿದ ತೀವ್ರ ಆಕ್ಷೇಪ ಗಾಯತ್ರಿ ಶಾಂತೇಗೌಡ ಅವರ ಹಾದಿಗೆ ದೊಡ್ಡ ಮುಳುವಾಯಿತೇ?

ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಅವರನ್ನು ಸಂಪೂರ್ಣವಾಗಿ ಬದಿಗೊತ್ತಿ ಎ.ವಿ. ಗಾಯತ್ರಿ ಶಾಂತೇಗೌಡ ಅವರಿಗೆ ಮಣೆ ಹಾಕಲು ಹೊರಟಿದ್ದ ಕ್ರಮವು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್‌ ಸದಸ್ಯೆ ಆರತಿ ಕೃಷ್ಣ ಅವರ ಅಸಮಾಧಾನಕ್ಕೂ ಕಾರಣವಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಹಾಗೂ ನೂತನ ಶಾಸಕರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಾಗ, ಮೂಡಿಗೆರೆಯ ಪ್ರಥಮ ಬಾರಿಯ ಶಾಸಕಿ ನಯನ ಮೋಟಮ್ಮ ಹೆಸರು ಮುನ್ನೆಲೆಗೆ ಬಂದಿತ್ತು. ಇತ್ತ ಹಿರಿಯ ಶಾಸಕರಾದ ಟಿ.ಡಿ. ರಾಜೇಗೌಡ ಹಾಗೂ ತರೀಕೆರೆಯ ಶ್ರೀನಿವಾಸ್ ಅವರು ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದರು.

ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯವರೇ ಸಚಿವರಾದರೆ ಸಮಸ್ಯೆಗಳನ್ನು ಪರಿಹರಿಸಿ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ನೆಪಮಾತ್ರಕ್ಕೆ ಕೆಡಿಪಿ ಸಭೆ, ಧ್ವಜಾರೋಹಣ ಅಥವಾ ಸಮಾರಂಭಗಳಿಗೆ ಬಂದು ಹೋಗುವ ಉಸ್ತುವಾರಿ ಸಚಿವರ ಬದಲಿಗೆ ಸ್ಥಳೀಯ ನಾಯಕನಿಗೆ ಅವಕಾಶ ನೀಡಬೇಕೆಂಬ ಅಪೇಕ್ಷೆ ಇತ್ತು. ಆದರೆ ಅದು ಈಡೇರದಿರುವುದು ದುರದೃಷ್ಟಕರವಾಗಿದೆ ಎಂದರು.

ಮಾಜಿ ಸಚಿವೆ ಮೋಟಮ್ಮ ನಂತರ ಚಿಕ್ಕಮಗಳೂರು ಜಿಲ್ಲೆಯಿಂದ ಯಾರೊಬ್ಬರಿಗೂ ಮಹಿಳಾ ಸಚಿವ ಸ್ಥಾನ ಒಲಿಯದಿರುವುದು ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ. ಸದ್ಯಕ್ಕೆ ಬಹಿರಂಗವಾಗಿ ಯಾರೂ ಮಾತನಾಡದಿದ್ದರೂ, ಪಕ್ಷದ ಒಳಗೊಳಗೆ ಈ ನಿರಾಸೆ ಮತ್ತು ಅಸಮಾಧಾನ ಇರುವುದಂತೂ ಸತ್ಯ. ಜಿಲ್ಲೆಯ ಶಾಸಕರಿಗೆ ಮಂತ್ರಿಗಿರಿ ದೊರಕದಿರುವುದು ಜಿಲ್ಲೆಯ ರಾಜಕಾರಣದಲ್ಲಿ ಬಿಜೆಪಿಗೆ ಟೀಕೆಗೆ ಒಳಪಡುವಂತಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪಟ್ಟಣಿಗೆರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಅಂತಿಮ ಹಂತದ ಈ ಹಠಾತ್ ಬೆಳವಣಿಗೆಯ ಬಳಿಕ ಗಾಯತ್ರಿ ಶಾಂತೇಗೌಡ ಅವರು ಮಾಧ್ಯಮಗಳಿಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...