ಸಮನ್ವಯ ಸಮಿತಿ ರಚನೆ ಕುರಿತು ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ ಸ್ಪಷ್ಟನೆ ನೀಡಿದ್ದಾರೆ.
ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ಮಾಹಿತಿಯಿಂದ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರ ಮಟ್ಟದ ಸಮನ್ವಯ ಸಮಿತಿಯ ಜೊತೆಗೆ ತಾಲೂಕು ಮಟ್ಟದ ಸಮನ್ವಯ ಸಮಿತಿಯೂ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಕ್ರಮ ಹಣ ವರ್ಗಾವಣೆ: ಸಿಬಿಐ ತನಿಖೆಗೆ ಹೆಚ್.ಪಿ ಮಂಜೇಗೌಡ ಆಗ್ರಹ
ಈ ಹಿಂದೆ ಕ್ಷೇತ್ರ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಇದೀಗ ಅದರ ಜೊತೆಗೆ ತಾಲೂಕು ಮಟ್ಟದಲ್ಲಿಯೂ ಸಮನ್ವಯ ಸಮಿತಿ ಇರಲಿದ್ದು, ಈ ಕುರಿತು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ತಾಲ್ಲೂಕುಗಳು ಹಾಗೂ ಎಂಟು ಹೋಬಳಿಗಳಿದ್ದು, ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.





