ಚಿಕ್ಕಮಗಳೂರು | ಧರ್ಮಸ್ಥಳ ಬುರುಡೆ ಪ್ರಕರಣ: ಅಪಪ್ರಚಾರ ಷಡ್ಯಂತ್ರ; ಸಿ.ಟಿ ರವಿ 

Date:

ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಬೃಹತ್‌ ಷಡ್ಯಂತ್ರ ರೂಪಿಸಲು ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ಹಣ ಬಳಕೆಯಾಗಿದೆ ಎನ್ನುವ ಮಾಹಿತಿಯೊಂದು ಈಗ ಬಯಲಾಗಿದೆ.

- Advertisement -

ಈ ಸ್ಫೋಟಕ ವಿದ್ಯಮಾನದ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಹಿಂದೆ ಅಂತರರಾಷ್ಟ್ರೀಯ ಮಟ್ಟದ ಹಾಗೂ ದೇಶವಿರೋಧಿ ಶಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ತಾವೇ ಇದನ್ನು ವ್ಯವಸ್ಥಿತ ಪಿತೂರಿ ಎಂದು ಹೇಳಿದಾಗ ಇಡೀ ವ್ಯವಸ್ಥೆ ತಮ್ಮ ಮೇಲೆ ಮುಗಿಬಿದ್ದಿತ್ತು ಎಂದು ನೆನಪಿಸಿಕೊಂಡ ಸಿ.ಟಿ. ರವಿ, ಈಗ ಕಾಲವೇ ಸತ್ಯವನ್ನು ಹೊರಹಾಕಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ಸಾರ್ವಜನಿಕರಲ್ಲಿ ಅಪನಂಬಿಕೆ ಹುಟ್ಟಿಸುವುದು, ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ಗೌರವಕ್ಕೆ ಮಸಿ ಬಳಿಯುವುದೇ ಈ ದುಷ್ಟ ಕೂಟದ ಮುಖ್ಯ ಉದ್ದೇಶವಾಗಿತ್ತು ಎಂದು ಅವರು ದೂರಿದ್ದಾರೆ. ನಕ್ಸಲರಿಗೆ ಬೆಂಬಲ ನೀಡುವ ಹಾಗೂ ಸಮಾಜದಲ್ಲಿ ಸದಾ ಅರಾಜಕತೆಯನ್ನೇ ಬಯಸುವ ನಟ ಪ್ರಕಾಶ್ ರಾಜ್ ಅಂತಹ ವ್ಯಕ್ತಿಗಳು ಈ ಸೂತ್ರದ ಪ್ರಮುಖ ಪಾಲುದಾರರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಇಂತಹವರನ್ನು ಪ್ರಚಾರಕ್ಕೆ ಬಳಸಿಕೊಂಡಿತ್ತು ಮತ್ತು ತಮ್ಮ ವಿರುದ್ಧ ಅಪಪ್ರಚಾರ ಮಾಡಲು ಪ್ರಕಾಶ್ ರಾಜ್ ಚಿಕ್ಕಮಗಳೂರಿಗೂ ಬಂದಿದ್ದರು ಎಂದು ಅವರು ಆಪಾದಿಸಿದ್ದಾರೆ. ಈ ಬೃಹತ್ ಷಡ್ಯಂತ್ರದ ಮೂಲವನ್ನು ಪತ್ತೆಹಚ್ಚಲು ಸರ್ಕಾರಕ್ಕೆ ನಿಜವಾದ ಪ್ರಾಮಾಣಿಕತೆ ಇದ್ದರೆ, ತಕ್ಷಣವೇ ಸ್ವಯಂಪ್ರೇರಿತ (ಸೋಮೋಟೋ) ಮೊಕದ್ದಮೆ ದಾಖಲಿಸಿಕೊಂಡು ಸಂಬಂಧಪಟ್ಟ ಪ್ರಭಾವಿಗಳನ್ನು ಬಂಧಿಸಬೇಕು ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಚಾರ್ಮಾಡಿ ಘಾಟ್ : ಬಂಡೆ ಕುಸಿತ; ತಪ್ಪಿದ ಅನಾಹುತ

ವೀರೇಂದ್ರ ಹೆಗ್ಗಡೆಯವರ ಕುಟುಂಬದ ವಿರುದ್ಧ ದುರುದ್ದೇಶಪೂರ್ವಕ ಅಪಪ್ರಚಾರ ನಡೆಸಿದ ಅಸಲಿ ಮಾಸ್ಟರ್‌ಮೈಂಡ್ ಯಾರು ಮತ್ತು ಯಾವ ನಿಗೂಢ ಉದ್ದೇಶಕ್ಕಾಗಿ ಈ ಸಂಚು ರೂಪಿಸಲಾಯಿತು ಎಂಬುದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಸಿ.ಟಿ ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...