ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ನಾಗರಾಳು ಗೇಟ್ ಬಳಿ ನಡೆದಿದೆ.
ಅಪಘಾತದಿಂದ ಗಾಯಗೊಂಡವರನ್ನು ರಾಮ್ ನಿವಾಶ್ ಹಾಗೂ ಅಪ್ರಾಪ್ತ ಬಾಲಕ ಇಬ್ಬರು ಗಾಯಲುಗಳು ಗಾಯಾಳುಗಳು ಎನ್ನಲಾಗಿದೆ. ದೇವನೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಬೈಕ್ ಮುಂಭಾಗದಲ್ಲಿ ಸಾಗುತ್ತಿದ್ದ ಜೆಸಿಬಿ (JCB) ವಾಹನದ ಚಾಲಕನು ಯಾವುದೇ ರೀತಿಯ ಮುನ್ಸೂಚನೆ ಅಥವಾ ಸಿಗ್ನಲ್ ನೀಡದೆ ಏಕಾಏಕಿ ವಾಹನವನ್ನು ತಿರುಗಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರಿಂದ ಗಾಬರಿಗೊಂಡ ಬೈಕ್ ಸವಾರನಿಗೆ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ, ಜೆಸಿಬಿ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ತಲೆ, ಕಾಲು ಹಾಗೂ ಮೈಕೈಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಅಪಘಾತದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಆದರೆ, ಗಾಯಗಳ ತೀವ್ರತೆ ಹೆಚ್ಚಾಗಿದ್ದರಿಂದ ವೈದ್ಯರ ಸಲಹೆಯಂತೆ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಳೆರಾಯನಿಗಾಗಿ ಕಪ್ಪೆ ಮದುವೆ, ಬಾಡೂಟ ಆಚರಣೆ
ಗಾಯಳುವಿನ ತಂದೆ ಜಗದೀಶ್ ಕುಮಾರ್ ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಿಯಮ ಬಾಹಿರವಾಗಿ ಹಾಗೂ ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ತನಿಖೆ ಮುಂದುವರಿಸಿದ್ದಾರೆ.





