ಚಿಕ್ಕಮಗಳೂರು | ಮಾಧ್ಯಮ ಕ್ಷೇತ್ರ ಆಡಳಿತ ವ್ಯವಸ್ಥೆ, ಸಾರ್ವಜನಿಕರ ನಡುವಿನ ಸೇತುವೆಯಾಗಿದೆ; ಭಂವರ್ ಸಿಂಗ್ ಮೀನಾ

Date:

ಚಿಕ್ಕಮಗಳೂರು ನಗರದ ಸೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರೆಸ್‌ಕ್ಲಬ್‌ ನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿವರು ಮಾತನಾಡಿ “ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಸರಕಾರಗಳ ಯೋಜನೆ, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವಲ್ಲಿ ಮಾಧ್ಯಮ ಕ್ಷೇತ್ರ ತನ್ನದೇಯಾದ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ” ಎಂದು ಜಿಲ್ಲಾಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು.

- Advertisement -
Screenshot 2026 07 17 22 51 24 76 99c04817c0de5652397fc8b56c3b3817

ಪ್ರಸಕ್ತ ದಿನಗಳಲ್ಲಿ ಪತ್ರಿಕೆಗಳು, ಸಾಮಾಜಿಕ ಜಾಲತಾಣ ಮತ್ತು ದೃಶ್ಯ ಮಾಧ್ಯಮಗಳು ರಾಜ ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯನ್ನು ಸದಾ ಎಚ್ಚರಿಸುವ ಕೆಲಸ ಮಾಡುತ್ತಿವೆ. ಈ ಮಾಧ್ಯಮಗಳ ಕಾರಣಕ್ಕೆ ಶಾಸಕಾಂಗ ಮತ್ತು  ಕಾರ್ಯಾಂಗ ವ್ಯವಸ್ಥೆ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತಾಗಿದೆ. ಮಾಧ್ಯಮ ಕ್ಷೇತ್ರವು ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕರ ನಡುವಿನ ಸೇತುವೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆ ಪರಸ್ಪರ ಸಮನ್ವಯದಿಂದ ಸಾಗಬೇಕು. ಆಡಳಿತ ವ್ಯವಸ್ಥೆ ಮತ್ತು ಜನರ ಸಮಸ್ಯೆಗಳ ಬಗ್ಗೆ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುವ ಯಾವುದೇ ಸಕಾರಾತ್ಮಕ ಅಥವಾ ಟೀಕಾತ್ಮಕ ಸುದ್ದಿಗಳನ್ನು  ಆಡಳಿತ ವ್ಯವಸ್ಥೆ ಪ್ರತಿದಿನ ಗಮನಿಸುತ್ತಿದೆ. ಇಂತಹ ಸುದ್ದಿಗಳ ಬಗ್ಗೆ ನಿರ್ಲಕ್ಷ್ಯ ವಹಿಸದೇ ಸಮಸ್ಯೆಗಳ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಒತ್ತು ನೀಡುತ್ತಿದೆ. ಒಟ್ಟಿನಲ್ಲಿ ಮಾಧ್ಯಮ ಕ್ಷೇತ್ರ ಆಡಳಿತ ವ್ಯವಸ್ಥೆಯನ್ನು ಸದಾ ಎಚ್ಚ-ರಿಸುವ ರಿಸುವ ಕೆಲಸ ಮಾಡುತ್ತಿದೆ. ಇದು ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಿಸಿದರು. 

Screenshot 2026 07 17 22 47 24 59 7352322957d4404136654ef4adb64504

ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಸಮಾಜವನ್ನುತಿದ್ದುವ ಮತ್ತು ಪ್ರಶ್ನಿಸುವ ನೈತಿಕತೆ ಇರುವುದು ಪತ್ರಕರ್ತರಿಗೆ ಮಾತ್ರ ಗ್ರಾಮ ಪಂಚಾಯಿಂದ ಹಿಡಿದು ಪಾರ್ಲಿಮೆಂಟ್ವರೆಗೆ ಪತ್ರಿಕೆಗಳ ಸುದ್ದಿಗಳು ಸದ್ದು ಮಾಡುತ್ತವೆ. ಈ ಕಾರಣಕ್ಕೆ ಪತ್ರಿಕಾರಂಗ ಸಮಾಜದಲ್ಲಿ ತನ್ನದೇಯಾದ ಸ್ಥಾನಮಾನ ಹೊಂದಿದೆ. ಸಮಾಜದ ಸ್ವಾಸ್ಥ್ಯ ಕಾಪಾಡುವ, ನೊಂದವರಿಗೆ ನ್ಯಾಯ ಕೊಡಿಸುವ ಅಕಾ-ರಿಗಳು, ರಾಜಕಾರಣಿಗಳ ತಪ್ಪುಗಳ ಬಗ್ಗೆ ಧ್ವನಿ ತಾಕತ್ತು ಇರುವುದು ಮಾಧ್ಯಮಗಳಿಗೆ ಮಾತ್ರ ಎಂದು ಅಭಿಪ್ರಾಯ ಪಟ್ಟರು.  ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದೊಂದು ದಶಕದಿಂದ ಪ್ರೆಸ್‌ ಕ್ಲಬ್ ಜನರ ಸಮಸ್ಯೆಗಳನ್ನು ಸಮಾಜಕ್ಕೆ ತಲುಪಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರೆಸ್‌ ಕ್ಲಬ್‌ಗೆ ಸ್ವಂತ ಕಟ್ಟಡ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ. ಜಿಲ್ಲಾಡಳಿತ ಸದ್ಯ ನಿವೇಶನ ಮಂಜೂರು ಮಾಡಿದ್ದು, ಈ ಸಂಬಂಧ ಇರುವ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಿಕೊಟ್ಟಲ್ಲಿ ಪ್ರೆಸ್‌ ಕ್ಲಬ್ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದು ಮನವಿ ಮಾಡಿದರು.

ಪ್ರೆಸ್‌ ಕ್ಲಬ್ ಅಧ್ಯಕ್ಷ ಚಂದ್ರೇಗೌಡ ಪತ್ರಿಕೋದ್ಯಮ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಆರನ್ ಮುಗ್ಲಿಂಗ್ ಆರಂಭಿಸಿದ ಮಂಗಳೂರು ಸಮಾಚಾರ ಎಂಬ ಕನ್ನಡ ಪತ್ರಿಕೆಯಿಂದಾಗಿ ರಾಜ್ಯದಲ್ಲಿ ಕ್ಷೇತ್ರದ ಉಗಮವಾಗಿದೆ. ಅಂದಿನಿಂದ ಇಂದಿನವರೆಗೆ ಪತ್ರಿಕೋದ್ಯಮ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಅಪಾರ ಬದಲಾವಣೆ ಕಂಡಿದೆ. ಸದ್ಯ ಪತ್ರಿಕಾರಂಗ ಜಿಲ್ಲೆ, ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ಸ್ಥಿತಿಗತಿಗಳ ಮೇಲೆ ಅಪಾರವಾದ ಪ್ರಭಾವ ಹಾಗೂ ಬದಲಾವಣೆ ತರುವ ನಿಟ್ಟಿನಲ್ಲಿ ದೊಡ್ಡಮಟ್ಟದ

ಕೊಡುಗೆ ನೀಡುತ್ತಿದೆ. ಪ್ರಸಕ್ತ ದಿನಗಳಲ್ಲಿ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಜನರ ಧ್ವನಿಯಾಗಿ ಯಾಗಿ ಕೆಲಸ ಮಾಡುತ್ತಿವೆ ಎಂದ ಅವರು, ನೈತಿಕತೆ ಮತ್ತು ಮೌಲ್ಯಾಧಾ-ರಿತ ಪತ್ರಿಕೋದ್ಯಮವನ್ನು ಎತ್ತಿ ಹಿಡಿಯುವ ಕೆಲಸವನ್ನು ಪತ್ರಕರ್ತರು ಮಾಡಬೇಕೆಂದರು. ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಬಿ.ಟಿ.ತಿಪ್ಪೇರುದ್ರಪ್ಪ ಮಾತನಾಡಿ, ಪತ್ರಕರ್ತರು ಪ್ರಸಕ್ತ ಸಕ್ತ ದಿನಗಳಲ್ಲಿ ಕ್ರಿಯಾಶೀಲ ಹಾಗೂ ಅಧ್ಯಯನ ಶೀಲರಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಈ ಕಾರಣಕ್ಕೆ ಮಾಧ್ಯಮ ಕ್ಷೇತ್ರ ಸಮಾಜದಲ್ಲಿ ತನ್ನದೇಯಾದ ಮಾನ್ಯತೆ ಪಡೆಯಲು ಸಾಧ್ಯವಾಗಿದೆ ಎಂದ ಅವರು, ಪತ್ರಿಕೆಗಳು ಮತ್ತು ದೃಶ್ಯಮಾಧ್ಯಮಗಳು ಯಾವಾಗಲು ನಿಷ್ಪಕ್ಷಪಾತವಾಗಿರಬೇಕು, ಸಮಾಜಮುಖಿಯಾಗಿರಬೇಕು. ನೊಂದವರು, ಧಮನಿತರು, ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು. ಪತ್ರಕರ್ತರಿಗೆ ರಾಜಕಾರಣಿಗಳು ನೆಪ ಮಾತ್ರ, ಅವರನ್ನು ಓಲೈಸುವ ಕೆಲಸ ಮಾಡದೇ, ತಪ್ಪುಗಳನ್ನು ಎತ್ತಿ ತೋರುವ ಮತ್ತು ತಪ್ಪುಗಳನ್ನುತಿದ್ದುವ ಕೆಲಸ ಮಾಡಬೇಕು ಎಂದು ಖಜಾಂಚಿ ಪ್ರೆಸ್‌ ಕ್ಲಬ್ ಮಾಜಿ ಅಧ್ಯಕ್ಷ ಪಿ.ರಾಜೇಶ್ ಮಾತನಾಡಿದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಇಸ್ರೋ ನೆರವಿನೊಂದಿಗೆ ಸ್ಯಾಟಲೈಟ್ ಬೆಳೆ ಸಮೀಕ್ಷೆ

ಈ ವೇಳೆ ಎಸ್ಪಿ ಜಿತೇಂದ್ರಕುಮಾರ್ ದಯಾಮ, ಪ್ರೆಸ್‌ ಕ್ಲಬ್ ಪುನೀತ್ ವೇದಿಕೆಯಲ್ಲಿದ್ದರು. ರೈತಸಂಘದ ಗುರುಶಾಂತಪ್ಪ, ಕಸಾಪ ತಾಲೂಕು ಅಧ್ಯಕ್ಷ ಲೋಕೇಶಪ್ಪ, ಎಸ್ಸಿ, ಎಸ್ಟಿ ದೌರ್ಜನ್ಯ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್ ಅನಿಸಿಕೆ ಹಂಚಿಕೊಂಡರು. ಪ್ರೆಸ್‌ ಕ್ಲಬ್ ಪ್ರಕಾರ್ಯದರ್ಶಿ ಎನ್.ಕೆ.ಗೋಪಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಮೂರ್ತಿ ಸ್ವಾಗತಿಸಿ, ಪತ್ರಕರ್ತ ಉಮೇಶ್ ವಂದಿಸಿದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...