ಚಿಕ್ಕಮಗಳೂರು | ಅಕಾಲಿಕ ಮಳೆ; ಅಡಕೆ ಎಲೆಚುಕ್ಕಿ ರೋಗ ಉಲ್ಬಣ

Date:

ಬೇಸಿಗೆಯಂತೆ 2 ತಿಂಗಳ ಕಾಲ ಕಂಡುಬಂದ ಬಿರುಬಿಸಿಲು ಅಡಕೆ ಎಲೆಚುಕ್ಕಿ ರೋಗ ಬಾಧೆಯನ್ನು ಹತೋಟಿಗೆ ತಂದಿತ್ತು. ಆದರೆ, ಈ ಸದ್ಯ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೋಗ ಮತ್ತೆ ಉಲ್ಬಣಗೊಂಡಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಸಂಸೆ, ಮರಸಣಿಗೆ ಪ್ರದೇಶದ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

“ಸಾಮಾನ್ಯವಾಗಿ ಅಕ್ಟೋಬರ್ ಮೊದಲ ವಾರದ ಬಳಿಕ ಮಳೆ ನಿಂತು ಚಳಿಗಾಲದ ಲಕ್ಷಣಗಳು ಕಂಡುಬರುತ್ತಿದ್ದವು. ಆದರೆ ಕಳೆದ 3 ವರ್ಷಗಳಿಂದ ಚಳಿಗಾಲವೇ ಇಲ್ಲದಂತೆ ವರ್ಷಪೂರ್ತಿ ಆಗಾಗ್ಗೆ ಮಳೆ ಸುರಿಯುತ್ತಿದೆ. ಈ ವರ್ಷವೂ ಅಕ್ಟೋಬರ್ ತಿಂಗಳಲ್ಲಿ 200 ಮಿ ಮೀ ಮಳೆ ಹಾಗೂ ನವೆಂಬರ್‌ನಲ್ಲಿ 100 ಮಿ ಮೀ ಮಳೆ ದಾಖಲಾಗಿದೆ. ವಾತಾವರಣದಲ್ಲಿನ ತೇವಾಂಶ ಮತ್ತು ತಾಪಮಾನದ ಹೆಚ್ಚಳದಿಂದ ಅಡಿಕೆ ತೋಟದಲ್ಲಿ ಶಿಲೀಂಧ್ರಗಳು ಚುರುಕಾಗಿವೆ. ಪರಿಣಾಮವಾಗಿ ಕಳೆದ 15 ದಿನದಲ್ಲಿ ಮತ್ತೆ ಎಲೆ ಚುಕ್ಕಿ ರೋಗದ ಬಾಧೆ ಮರುಕಳಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈಗಾಗಲೇ ಅಡಿಕೆ ಕೊಯ್ಲು ಆರಂಭವಾಗಿದ್ದು, ಕಳೆದ ವರ್ಷದ ಎಲೆಚುಕ್ಕಿ ರೋಗದಿಂದ ಆಗಿರುವ ಹಾನಿಯ ಪ್ರಮಾಣ ಈಗ ಅರಿವಾಗುತ್ತಿದೆ. ಫಸಲಿನಲ್ಲಿ ಶೇ. 30ರಿಂದ 50ರಷ್ಟು ಅಡಿಕೆ ಕುಸಿತವಾಗಿದೆ. ಮಳೆಗಾಲದಲ್ಲಿ ಮಳೆ ಕಡಿಮೆ ಆದಾಗ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಂತೆಂದು ಖುಷಿ ಪಟ್ಟಿದ್ದೆವು. ಆದರೆ ಈಗ ಮಳೆ ಆರಂಭವಾಗಿ ಬಾಧೆ ಹೆಚ್ಚಾಗುತ್ತಿದೆ. ಅಡಿಕೆ ತೋಟ ಮಾರಾಟ ಮಾಡುವಂತಾಗಿದೆ” ಎಂದು ಸಂಸೆಯ ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಬರ ತಾಲೂಕು ಪಟ್ಟಿ ಘೋಷಿಸಿದರೂ ಹೊಲದತ್ತ ಬಾರದ ಅಧಿಕಾರಿಗಳು; ರೈತರ ಆರೋಪ

“ತೋಟಗಾರಿಕಾ ಇಲಾಖೆಯು ಕಳೆದ ವರ್ಷದಂತೆ ಈಗಲೂ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಿಸಿ ಎಂಬ ಸಲಹೆ ನೀಡಿದೆ. ಕೆಲ ಬೆಳೆಗಾರರು ಡ್ರೋನ್ ಬಳಸಿ ಔಷಧಿ ಸಿಂಪಡಿಸುವ ಕೆಲಸಕ್ಕೂ ಕೈ ಹಾಕಿದ್ದಾರೆ. ಆದರೆ ಡ್ರೋನ್ ಬಳಸಿ ಔಷಧಿ ಸಿಂಪಡಣೆ ಮಾಡುವುದನ್ನು ಇಲಾಖೆಯು ಶಿಫಾರಸು ಮಾಡಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...