ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 26ರಂದು ಶೃಂಗೇರಿಯಲ್ಲಿ ‘ವಂದೇ ಮಾತರಂ’ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಕೇಂದ್ರ ಜಿಲ್ಲಾ ದಿಶಾ ಸಮಿತಿ ಸದಸ್ಯ ಮಣಿಕಂಠನ್ ಕಂದಸ್ವಾಮಿ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಮೆಣಸೆ ವೃತ್ತದಿಂದ ಪಾದಯಾತ್ರೆ ಆರಂಭಗೊಂಡು, ಶೃಂಗೇರಿ ಬಸ್ ನಿಲ್ದಾಣದವರೆಗೆ ಸಾಗಲಿದೆ. ರಾಷ್ಟ್ರೀಯತೆ ಹಾಗೂ ದೇಶಭಕ್ತಿಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಎನ್. ಜೀವರಾಜ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ನಿಕಟಪೂರ್ವ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಮಣಿಕಂಠ ಕಂದಸ್ವಾಮಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್
ಈ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ದೇಶಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಣಿಕಂಠನ್ ಕಂದಸ್ವಾಮಿ ಮನವಿ ಮಾಡಿದ್ದಾರೆ.




