ಚಿಕ್ಕಮಗಳೂರು ತಾಲೂಕು ಶ್ರೀ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಏ.18 ರಂದು ಬೆಳಿಗ್ಗೆ 10.30ಕ್ಕೆ ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ‘ಮೈತ್ರಾದೇವಿ, ಬಿ.ಎಸ್ ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯ ಭವನ’ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶಿವಶಂಕರ ತಿಳಿಸಿದರು.
ಸಮುದಾಯ ಭವನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸಭಾಂಗಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಸಚಿವ ಎಂ.ಬಿ ಪಾಟೀಲ್, ಸಚಿವೆ ಲಕ್ಷ್ಮಿಹೆಬ್ಬಾಳ್ಳರ್ ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಗೌಡ, ಶಾಸಕ ಎಚ್.ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಭೋಜೇಗೌಡ ಭಾಗವಹಿಸಲಿದ್ದಾರೆ. ಸಮಾಜದ ಚಟುವಟಿಕೆ ಮತ್ತು ಅಭಿವೃದ್ದಿ ಪಡಿಸಲು ಯೋಜನೆಗಳನ್ನು ಹೊಂದಿದ್ದು, ಅಂದಾಜು 12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸಮುದಾಯ ಭವನ ಸಮಾಜಕ್ಕೆ ಲೋಕಾರ್ಪಣೆಗೊಳಿಸಲು ಸಂತಸದಂದಿದೆ ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶಿವಶಂಕರ್ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಾಂಗಲ್ಯ ಸರ ಕಳ್ಳತನ; ಪ್ರಕರಣ ದಾಖಲು
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಎಚ್.ಎನ್ ನಂಜೇಗೌಡ, ರೇಣುಕಾರಾಧ್ಯ, ಎಂ.ಎಸ್ ನಿರಂಜನ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಕಾರ್ಯದರ್ಶಿ ನಂದೀಶ್ ಉಪಸ್ಥಿತರಿದ್ದರು.





