ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಜಯ ಯಾತ್ರೆ’ ಬೈಕ್ ಜಾಥಾ ನೆರವೇರಿತು. ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿನ ಸಂಭ್ರಮಕ್ಕಾಗಿ ಈ ವಿಜಯೋತ್ಸವವನ್ನು ಚಿಕ್ಕಮಗಳೂರು ನಗರದಲ್ಲಿ ಆಯೋಜಿಸಲಾಗಿತ್ತು.
ನೂರಾರು ಬಿಜೆಪಿ ಕಾರ್ಯಕರ್ತರು ಬೈಕ್‌ಗಳಲ್ಲಿ ಕೇಸರಿ ಧ್ವಜಗಳನ್ನು ಹಿಡಿದು ನಗರದಾದ್ಯಂತ ಸಂಚರಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಕಚೇರಿಯಿಂದ ಆರಂಭವಾದ ಈ ಜಾಥಾವು ಬೋಳರಾಮೇಶ್ವರ ದೇವಸ್ಥಾನ, ಐ.ಜಿ ರಸ್ತೆ, ಬಸವನಹಳ್ಳಿ ಮುಖ್ಯ ರಸ್ತೆ ಹಾಗೂ ಎಂ.ಜಿ ರಸ್ತೆಯ ಮೂಲಕ ಸಾಗಿ ಅಜಾದ್ ಪಾರ್ಕ್‌ನಲ್ಲಿ ಸಮಾರೋಪಗೊಂಡಿತು. ಜೈ ಶ್ರೀರಾಮ್ ಮತ್ತು ಜೈ ಬಿಜೆಪಿ ಎಂಬ ಘೋಷವಾಕ್ಯಗಳೊಂದಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮರು ಮತ ಏಣಿಕೆ: ಟಿ.ಡಿ. ರಾಜೇಗೌಡ ಚುನಾವಣಾಧಿಕಾರಿಗೆ ದೂರು
ಈ ಜಾಥಾದಲ್ಲಿ ಬಿಜೆಪಿ ಮುಖಂಡರು ಹಾಗೂ ಯುವಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಶಕ್ತಿಯನ್ನು ಪ್ರದರ್ಶಿಸಿದರು.




