ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ವ್ಯಕ್ತಿಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ಸಾವನಪ್ಪಿದ ವ್ಯಕ್ತಿ ಕೃಷ್ಣಮೂರ್ತಿ ಎಂಬಾತ, ದನ ಹುಡುಕಲು ಹೋದ ವೇಳೆ ಈ ದುರಂತ ನಡೆದಿದೆ. ನಾಲ್ಕು ದಿನದ ಹಿಂದೆ ಹಾಸನ ಜಿಲ್ಲೆ ಬೇಲೂರು ವ್ಯಾಪ್ತಿಯಲ್ಲಿ ಇಬ್ಬರು ಕಾಡಾನೆ ತುಳಿತಕ್ಕೆ ಸಾವನಪ್ಪಿದ್ದರು. ಈಗ ಕಾಫಿನಾಡಿನಲ್ಲಿ ಇಂದು ವ್ಯಕ್ತಿಯನ್ನು ಕಾಡಾನೆ ತುಳಿದು ಕೊಂದಿದೆ.
ಕೃಷ್ಣಮೂರ್ತಿ ಅವರು ತೋಟದಲ್ಲಿದ್ದಾಗ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೆ ವ್ಯಕ್ತಿ ಸಾವನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಕಾಡಾನೆ ದಾಳಿಗೆ ಕಾರ್ಮಿಕ ಸಾವು
ಈ ಘಟನೆ ನರಸಿಂಹರಾಜಪುರ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿರಂತರ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ರೈತರಿಗೆ, ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಅದೇಷ್ಟು ಜೀವಗಳು ಬಲಿಯಾಗಿವೆ ಎಂದು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.



