ಚಿಕ್ಕಮಗಳೂರು | ಬಸವಣ್ಣ ಸಮಾನತೆ ದಾರಿ ತೋರಿದ ಮಹಾನ್ ಮಾನವತಾವಾದಿ: ಶಾಸಕ ತಮ್ಮಯ್ಯ

Date:

ಚಿಕ್ಕಮಗಳೂರು: ಬಸವಣ್ಣನವರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತರಾದವರಲ್ಲ, ಅವರು ಇಡೀ ಮಾನವಕುಲಕ್ಕೆ ಸಮಾನತೆಯ ದಾರಿ ತೋರಿದ ಮಹಾನ್ ಮಾನವತಾವಾದಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

- Advertisement -

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ ಹಾಗೂ ವಾಲ್ಮೀಕಿಯಂತಹ ಮಹಾಪುರುಷರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ, ಇವರನ್ನು ಒಂದು ಜಾತಿಗೆ ಸೀಮಿತಗೊಳಿಸುತ್ತಿರುವುದು ವಿಷಾದನೀಯ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

೧೨ನೇ ಶತಮಾನದಲ್ಲಿ ಬಸವಣ್ಣನವರು ಕಂಡ ಸಮ ಸಮಾಜದ ಕನಸಿಗೆ, ೨೦ನೇ ಶತಮಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮುದ್ರೆ ಒತ್ತಿದ್ದಾರೆ. ಇಬ್ಬರೂ ಪ್ರತಿಪಾದಿಸಿದ್ದು ಸಮಾನತೆ ಮತ್ತು ನೈತಿಕತೆಯ ಹಾದಿಯನ್ನೇ ಎಂದು ಅವರು ಹೇಳಿದರು. ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಮಾತನಾಡಿ, ಮಹಾ ಪುರುಷರ ತತ್ವಗಳು ಕೇವಲ ಭಾಷಣಕ್ಕೆ ಸೀಮಿತವಾಗಬಾರದು, ಅವು ನಮ್ಮ ಬದುಕಿನ ಭಾಗವಾಗಬೇಕು ಎಂದು ಆಶಿಸಿದರು.

ಇಂದು ಯಾರನ್ನು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರೋ ಅವರನ್ನೇ ಜಾತಿಯ ಚೌಕಟ್ಟಿನೊಳಗೆ ಬಂಧಿಸಿ ಆಚರಿಸುತ್ತಿರುವುದು ಆ ಮಹಾತ್ಮರಿಗೆ ಮಾಡುವ ಅಪಚಾರವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಫೆಕ್) ಅಧ್ಯಕ್ಷ ಬಿ.ಹೆಚ್. ಹರೀಶ್ ಮಾತನಾಡಿ, ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರು ಕೇವಲ ಒಂದು ಜಾತಿಗೆ ಸೀಮಿತವಾಗದೆ, ಇಡೀ ಮನುಕುಲದ ದಾರಿದೀಪವಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿದ್ದೀರಾ?ತರೀಕೆರೆ | ದ್ವಾರನಾಳು: ವಿದ್ಯುತ್ ಸಂಪರ್ಕ ಕಾಮಗಾರಿ; ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

ಸಾಹಿತಿ ಬಿ.ತಿಪ್ಪೆರುದ್ರಪ್ಪ ಮಾತನಾಡಿ, ಬಸವಣ್ಣನವರು ಒಬ್ಬ ಸ್ವತಂತ್ರ ವಿಚಾರವಾದಿ ಚಿಂತಕನಾಗಿ ಸಮಾಜದಲ್ಲಿ ನೆಲೆಸಿದ್ದ ಮೌಢ್ಯಗಳಾದ ಜಾತೀಯತೆ, ವರ್ಣಪದ್ಧತಿ ಮತ್ತು ಶ್ರೇಣೀಕೃತ ವರ್ಗೀಕರಣದ ವಿರುದ್ಧ ಹೋರಾಡಿ ಒಂದು ಸರ್ವ ಸಮಾನತೆಯ ಸಮಾಜವನ್ನು ಕಟ್ಟಲು ಬಯಸಿದವರು.ಇದೊಂದು ಅದ್ಭುತವಾದ ಪ್ರಜಾಪ್ರಭುತ್ವದ ಪರಿಕಲ್ಪನೆ ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ತಹಶೀಲ್ದಾರ್ ರೇಷ್ಮಾಶೆಟ್ಟಿ, ಡಿವೈಎಸ್‌ಪಿ ನಾಗರಾಜ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...