ಚಿಕ್ಕಮಗಳೂರು | ಮನನೊಂದು ಯುವಕ ಸಾವು 

Date:

ಪೊಲೀಸರ ವಿಚಾರಣೆ ನಂತರ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

- Advertisement -

ಮೃತ ಯುವಕ ಚಂದನ್(20), ಕುಲ್ಲೂರು ಗ್ರಾಮದ ನಿವಾಸಿ. ಇತ್ತೀಚೆಗೆ ಇದೇ ಗ್ರಾಮದ ಹುಡುಗಿಯೊಬ್ಬಳು ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದು, ಆಕೆಯ ಮೊಬೈಲ್ ಕರೆಗಳ ವಿವರವನ್ನು ಪರಿಶೀಲಿಸಿದಾಗ ಚಂದನ್ ನಂಬ‌ರ್ ಪತ್ತೆಯಾಗಿತ್ತು. ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮಾತುಕತೆ ನಡೆಸಿದ್ದ ಕಾರಣಕ್ಕಾಗಿ ಬೀರೂರು ಪೊಲೀಸರು ಚಂದನ್‌ನನ್ನು ಸಾಮಾನ್ಯ ವಿಚಾರಣೆಗೆಂದು ಠಾಣೆಗೆ ಕರೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ವಿಚಾರಣೆ ಮುಗಿದ ಬಳಿಕ ಪೊಲೀಸರು ನಿನ್ನೆ ಸಂಜೆ ಆತನನ್ನು ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ, ಮನೆಗೆ ಮರಳಿದ ಚಂದನ್ ಸಂಜೆ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಡುಗಿ ಓಡಿ ಹೋಗಲು ಈತನೇ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಮಾತನಾಡಿಕೊಂಡಿದ್ದರಿಂದ ತೀವ್ರ ಮನನೊಂದು ಆತ ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಚಂದನ್ ತನ್ನ ತಾಯಿಗೆ ಮೊಬೈಲ್‌ನಲ್ಲಿ ಸಂದೇಶವೊಂದನ್ನು ರವಾನಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಮತದಾರರ ಪಟ್ಟಿ  ಪರಿಷ್ಕರಣೆ ಪಾರದರ್ಶಕವಾಗಿ ನಡೆಸಲಾಗುವುದು; ಲತಾ ಕುಮಾರಿ

ಪ್ರಸ್ತುತ ಚಂದನ್ ಆತ್ಮಹತ್ಯೆಗೆ ಕೇವಲ ಪೊಲೀಸರ ವಿಚಾರಣೆ ಮಾತ್ರ ಕಾರಣವೇ ಅಥವಾ ಜನರ ಆಪಾದನೆ ಹಾಗೂ ಬೇರೇನಾದರೂ ಹಿನ್ನೆಲೆ ಇದೆಯೇ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ.  ಘಟನೆಗೆ ಸಂಬಂಧಿಸಿದಂತೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...