ಚಿಕ್ಕಮಗಳೂರು | ಅಪಘಾತ: ಎಂಟು ಜನ ಸ್ಥಳದಲ್ಲೇ ಸಾವು 

Date:

ಮಂತ್ರಾಲಯಕ್ಕೆ ಯಾತ್ರೆ ತೆರಳಿದ್ದ ಯಾತ್ರಿಗಳ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -
Screenshot 2026 04 16 18 02 56 14 40deb401b9ffe8e1df2f1cc5ba480b12

ಅಪಘಾತದಲ್ಲಿ ತರೀಕೆರೆ ತಾಲೂಕಿನ ಉಡೆವಾ ಗ್ರಾಮದ ಪುಟ್ಟಮ್ಮ (65) ಹಾಗೂ ಮೀನಾಕ್ಷಿ (50) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶೆಟ್ಟಿಗೆರೆ ಗ್ರಾಮದ ಆರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ತರೀಕೆರೆ ತಾಲೂಕಿನ ಉಡೆವಾ ಗ್ರಾಮದಿಂದ ಒಟ್ಟು 18 ಜನರ ತಂಡ ಮಂತ್ರಾಲಯ ಯಾತ್ರೆಗಾಗಿ ಪ್ರವಾಸ ಹಮ್ಮಿಕೊಂಡಿತ್ತು. ಇವರೆಲ್ಲರೂ ಸಂಬಂಧಿಕರಾಗಿದ್ದು, ರಾಯರ ದರ್ಶನಕ್ಕೆ ತೆರಳುತ್ತಿದ್ದಾಗ ಮಂತ್ರಾಲಯದ ಸಮೀಪವೇ ಇವರಿದ್ದ ವಾಹನ ಅಪಘಾತಕ್ಕೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಅಂಬೇಡ್ಕರ್ ಜಯಂತಿ: ಕಾರು ಹರಿದು ಸ್ಥಳದಲ್ಲೇ ಬಾಲಕಿ ಸಾವು 

ಯಾತ್ರೆಗೆ ಹೋಗಿ ಸಂಭ್ರಮದಿಂದ ಬರುತ್ತಾರೆ ಎಂದು ಕಾಯುತ್ತಿದ್ದ ಉಡೆವಾ ಗ್ರಾಮಸ್ಥರಿಗೆ ಈ ಸುದ್ದಿ ಅತೀವ ಆಘಾತ ತಂದಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...