ಚಿಕ್ಕಮಗಳೂರು | ಸರ್ಕಾರಿ ವೈದ್ಯರ ನಿರ್ಲಕ್ಷ್ಯದ ಆರೋಪ; ಮಹಿಳೆ ಸಾವು 

Date:

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೆ ಲಕ್ಕವಳ್ಳಿಯಲ್ಲಿ ಹೃದಯಾಘಾತವಾಗಿದ್ದ ಮಹಿಳೆಯನ್ನ ಆಸ್ಪತ್ರೆಗೆ ಕರೆತಲು ಆಂಬ್ಯುಲೆನ್ಸ್ ಕಳಿಸದೆ ನಿರ್ಲಕ್ಷ್ಯ ತೋರಿದ ವೈದ್ಯರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ನಡೆದಿದೆ.

- Advertisement -

ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಳುಹಿಸಲು ವೈದ್ಯರು ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೈದ್ಯರು ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಳುಹಿಸಲು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ಮೃತ ದುರ್ದೈವಿ ಮಹಿಳೆಯನ್ನು ಸುಶೀಲಾ (41) ಎಂದು ಗುರುತಿಸಲಾಗಿದೆ. ಮಹಿಳೆಯ ಸಾವಿಗೆ ಕಾರಣವಾದ ವೈದ್ಯರ ಹಣದ ದಾಹದ ವಿರುದ್ಧ ಆಸ್ಪತ್ರೆ ಮುಂದೆ ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತರೀಕೆರೆ ತಾಲೂಕಿನ ಹಳೆ ಲಕ್ಕವಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಹೃದಯಾಘಾತದಿಂದ ಮಹಿಳೆ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ಮಧ್ಯಾಹ್ನವೇ ಹೃದಯಾಘಾತವಾಗಿದ್ರೂ ಸಂಜೆಯಾದ್ರೂ ವೈದ್ಯರು ದುಡ್ಡು ಕೊಡದೆ ಆಂಬ್ಯುಲೆನ್ಸ್ ಕಳುಹಿಸಿಲ್ಲ. ಬಳಿಕ 108 ಆಂಬ್ಯುಲೆನ್ಸ್ ಮೂಲಕ ಮೃತ ಸುಶೀಲಾ ಕುಟುಂಬಸ್ಥರು ಶಿವಮೊಗ್ಗ ಆಸ್ಪತ್ರೆಗೆ ಕರೆಯ್ದೊಯ್ದಿದ್ದಾರೆ.

ಆದರೆ ಶಿವಮೊಗ್ಗ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸುಶೀಲಾ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಲಕ್ಕವಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಲಕ್ಕವಳ್ಳಿ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ‌ಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಕ ಮಾಡುವಂತೆ‌ ಒತ್ತಾಯ ಮಾಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...