ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ವ್ಯಾಪ್ತಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮನೆಯೊಂದರ ಮೇಲೆ ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಂದರಲ್ಲಿ ದಂಧೆಕೋರರು ಡಾಲ್ಡಾ, ರಾಸಾಯನಿಕ ಬಳಸಿ ತುಪ್ಪ ತಯಾರಿಸಿರುವುದು ಗೊತ್ತಾಗಿದೆ. ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಈದ್ ಮಿಲಾದ್: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
ದಂಧೆಕೋರರು ಮನೆಯ ಬಾಗಿಲು ಲಾಕ್ ಮಾಡಿ ಪರಾರಿಯಾಗಿದ್ದರು. ಕಳೆದ ವಾರ ಪಾಳುಬಿದ್ದ ಮನೆಯ ಮೇಲೆ ದಾಳಿ ಮಾಡಿ ನಕಲಿ ತುಪ್ಪ ವಶಪಡೆಸಿಕೊಂಡಿದ್ದರು. ಬಳ್ಳಾರಿ ಮೂಲದ ಒಂದೇ ಟೀಮ್ ನಿಂದ ನಿರಂತರವಾಗಿ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.




