ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ರೈತ ಪ್ರಸನ್ನ (40), ಕಳೆದ ಮಂಗಳವಾರ ಸಂಜೆ ಸುರಿದ ಭಾರೀ ಮಳೆ, ಗಾಳಿಯಿಂದಾಗಿ ಗುರುಮೂರ್ತಿ ಅವರ ತೋಟದ ಮೂಲಕ ಹಾದು ಹೋಗಿದ್ದ ವಿದ್ಯುತ್ ಮಾರ್ಗದ ತಂತಿಗಳು ತುಂಡಾಗಿ ನೆಲದ ಮೇಲೆ ಬಿದ್ದಿದ್ದವು. ಬುಧವಾರ ಬೆಳಗ್ಗೆ ತೋಟಕ್ಕೆ ಹೋಗಿದ್ದ ವೇಳೆ ಗುರುಮೂರ್ತಿ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ವಶಕ್ಕೆ ಪಡೆದ ಪೊಲೀಸರು
ಪ್ರಸನ್ನ ಅವರ ತೋಟದ ಬಳಿ ಹಾದು ಹೋಗಿದ್ದ ವಿದ್ಯುತ್ ಮಾರ್ಗದ ಕಂಬಗಳು ಶಿಥಿಲಗೊಂಡಿದ್ದು, ಸ್ಥಳಾಂತರಕ್ಕೆ ಕುಟುಂಬಸ್ಥರು ಮೆಸ್ಕಾಂಗೆ ಅನೇಕ ಬಾರಿ ಮನವಿ ಮಾಡಿದ್ದರು ಬೇಜವಾಬ್ದಾರಿಯಿಂದ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತ ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.




