ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

Date:

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 

- Advertisement -

ಮೃತಪಟ್ಟ ವ್ಯಕ್ತಿ ಸುನೀಲ್ (38) ಎಂಬಾತ, ಅಡಕೆ ತೋಟ ಬೆಳೆದು ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ಸುನೀಲ್, ಇದಕ್ಕಾಗಿ ವಿವಿಧ ಬ್ಯಾಂಕುಗಳು ಹಾಗೂ ಖಾಸಗಿ ಫೈನಾನ್ಸ್‌ಗಳಿಂದ 10 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಆದರೆ, ಬಯಲುಸೀಮೆ ಭಾಗದಲ್ಲಿ ಸಕಾಲಕ್ಕೆ ಮಳೆಯಾಗದೆ ತೀವ್ರ ಮಳೆ ಕೊರತೆ ಎದುರಾದ ಕಾರಣ, ಬೆಳೆದು ನಿಲ್ಲಬೇಕಿದ್ದ ತೋಟವನ್ನು ಉಳಿಸಿಕೊಳ್ಳಲು ತೀವ್ರ ಪರದಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆಯೂ ಇಲ್ಲದೆ, ಕೈಗೆ ಬೆಳೆಯೂ ಬಾರದೆ ತೀವ್ರ ನಷ್ಟಕ್ಕೆ ಸಿಲುಕಿದ ಸುನೀಲ್‌, ಮಾಡಿದ ಸಾಲವನ್ನು ತೀರಿಸಲಾಗದೆ ತೀವ್ರ ಮಾನಸಿಕ ಆಘಾತ ಹಾಗೂ ಆತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ಸಾಲದ ಬಾಧೆ ಮಿತಿಮೀರಿದ ಹಿನ್ನೆಲೆಯಲ್ಲಿ ತಾಲೂಕಿನ ಹುಣಸಘಟ್ಟ ಗ್ರಾಮದ ಬಳಿ ಹರಿಯುವ ಭದ್ರಾ ಚಾನೆಲ್‌ಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ಸುನೀಲ್ ಮೃತ ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿ ಮುಂದಿನ ಕಾನೂನು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಹಳ್ಳಿ ಖಾಸಗಿ ಬಸ್‌ಗಳ ಅಕ್ರಮ ಧೋರಣೆ ಖಂಡಿಸಿ ಪ್ರತಿಭಟನೆ: ದುರ್ಗಾಂಬಾ ವಿರುದ್ಧ ಕಾನೂನು ಕ್ರಮ

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ...

ಸಾಗರ | ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿ: ಶಾಸಕ ಬೇಳೂರು

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ...

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...