ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯ ಬಳಿಕ ಮನೆಗೆ ಬಂದ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದು. ಇದರಿಂದ ಆಘಾತಕ್ಕೊಳಗಾದ ಬಾಲಕಿಯ ತಾಯಿ ಶೃಂಗೇರಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹುಬ್ಬಳ್ಳಿ- ಚಿಕ್ಕಮಗಳೂರು ನಡುವೆ ವಿಶೇಷ ರೈಲು ಸಂಚಾರ
ಪೋಷಕರ ದೂರಿನ ಅನ್ವಯ ಕಾರ್ಯಪ್ರವೃತ್ತರಾದ ಶೃಂಗೇರಿ ಪೊಲೀಸರು, ಆರೋಪಿ ಶಬೀರ್‌ನನ್ನ ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಆರೋಪಿಯ ವಿರುದ್ಧ ಹೊಸ ಕಾನೂನಿನ ಕಲಂ ಪೋಕೋ ಕಾಯ್ದೆ ಹಾಗೂ ಎಸ್ಸಿ/ಎಸ್ಟಿ (SC/ST) ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಆರೋಪಿಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.




