ಚಿಕ್ಕಮಗಳೂರು | ಆಲ್ದೂರು ಸಮೀಪ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

Date:

Advertisements

ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿದ್ದು, ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಬಳಿಯ ಆರೆನೂರು ದುರ್ಗದಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಹೋಗಲು ಪ್ರಯತ್ನಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೂ ಆನೆ ದಾಳಿಮಾಡಲು ಪ್ರಯತ್ನಿಸಿದೆ ಎನ್ನಲಾಗಿದೆ. ಅರಣ್ಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಸ್ಥಳದಲ್ಲಿ ಓಡಿಸಿದ್ದು, ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಆಲ್ದೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸುತ್ತಮುತ್ತಲಿದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಆನೆಗಳ ಚಲನ-ವಲನದ ಮೇಲೆ ಅರಣ್ಯ ಸಿಬ್ಬಂದಿಗಳು ನಿಗಾವಹಿಸಿದ್ದಾರೆ. ಆದರೂ, ಕಾರ್ಮಿಕರೊಬ್ಬರು ಆನೆ ದಾಳಿಗೆ ಬಲಿಯಾಗಿದ್ದಾರೆ.

Advertisements

ಎರಡು ದಿನದ ಹಿಂದಷ್ಟೇ ಸಕಲೇಶಪುರ ಆಲೂರು ಸಮೀಪ ಶಾರ್ಪ್ ಶೂಟರ್ ಒಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಶಾಲೆಗಳಿಗೆ ಮಾತ್ರ ರಜೆ, ಕಾಲೇಜಿಗೆ ರಜೆ ಯಾಕಿಲ್ಲ; ಕಾಲೇಜ್ ವಿದ್ಯಾರ್ಥಿಗಳು

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ಕೊಪ್ಪ, ಕಳಸ, ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ ಹಾಗೂ...

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ...

Download Eedina App Android / iOS

X