ಚಿಕ್ಕಮಗಳೂರು | ಸರ್ಕಾರ ವಿತರಿಸುವ ಅಕ್ಕಿಯಲ್ಲಿ ಹುಳ ಪತ್ತೆ

Date:

ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಯಲ್ಲಿ ಸರ್ಕಾರದಿಂದ ವಿತರಿಸಿದ ಅಕ್ಕಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಈ ಶಾಖೆಯಲ್ಲಿ ಅಂದಾಜು 600ಕ್ಕೂ ಹೆಚ್ಚು ಪಡಿತರ ಚೀಟಿಗಳು ಇದ್ದು, ಫಲಾನುಭವಿಗಳಿಗೆ ಪೂರೈಕೆ ಮಾಡುವ ಅಕ್ಕಿಯ ದಾಸ್ತಾನಿನ 50ಕ್ಕೂ ಹೆಚ್ಚಿನ ಮೂಟೆಗಳಲ್ಲಿ ಹುಳ ಕಂಡುಬಂದಿದೆ. ಅಕ್ಕಿಯ ಗುಣಮಟ್ಟ ಸರಿ ಇಲ್ಲ. ಹಳೆಯ ದಾಸ್ತಾನು ಇದ್ದಂತೆ ಕಾಣುತ್ತಿದ್ದು, ಒಳ್ಳೆಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ನೀಡುತ್ತಿದ್ದಾರೆ. ಕೃಷಿ ಪತ್ತಿನ ಸಂಘದವರು ಅಕ್ಕಿ ಬಂದಾಗಲೇ ಅದರ ಗುಣಮಟ್ಟವನ್ನು ಪರಿಶೀಲಿಸಬೇಕಿತ್ತು. ಸಮರ್ಪಕವಾಗಿ ಇಲ್ಲದ ಅಕ್ಕಿಯನ್ನು ವಾಪಸ್ ಕಳುಹಿಸಬೇಕಿತ್ತು. ಕಳಪೆ ಅಕ್ಕಿಯನ್ನು ಜನರಿಗೆ ವಿತರಿಸಿ ಅವರ ಆರೋಗ್ಯದಲ್ಲಿ ಬೇಜವಾಬ್ದಾರಿತನ ಮಾಡಬಾರದು ಎಂದು ಸಾರ್ವಜನಿಕರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬೀದಿ ನಾಯಿ ದಾಳಿಗೆ ಮೂರು ಕುರಿ ಸಾವು 

ನಾವೆಲ್ಲರೂ ಕೂಲಿ ಕಾರ್ಮಿಕರು. ಈಗಾಗಲೇ ಅಕ್ಕಿ ತೆಗೆದುಕೊಳ್ಳಲು ಕೆಲಸಕ್ಕೆ ರಜೆ ಹಾಕಿದ್ದೇವೆ. ನಾಳೆ ಅಥವಾ ಇನ್ನೊಂದು ದಿನ ಉತ್ತಮ ಅಕ್ಕಿ ಬಂದಾಗ ಅದನ್ನು ತೆಗೆದುಕೊಳ್ಳಲು ಮತ್ತೆ ರಜೆ ಹಾಕಬೇಕು. ಪ್ರತಿದಿನ ರಜೆ ಹಾಕಿ ಅಕ್ಕಿ ಪಡೆಯಲು ಬರಲು ತೊಂದರೆ ಆಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಪಂಜಾಬ್‌ನಿಂದ ಬಂದ ಅಕ್ಕಿಯ ದಾಸ್ತಾನು ಇದಾಗಿದ್ದು, ಈಗಾಗಲೇ ಸಮಸ್ಯೆಯ ಕುರಿತು ತಾಲ್ಲೂಕು ವ್ಯವಸಾಯ ಕೃಷಿ ಉತ್ಪನ್ನ ಸಂಘಕ್ಕೆ ಮಾಹಿತಿ ನೀಡಲಾಗಿದೆ. ಹುಳ ಇರುವ ಅಕ್ಕಿ ಮೂಟೆಗಳನ್ನು ಪ್ರತ್ಯೇಕ ಇರಿಸುವಂತೆ ಸೂಚಿಸಿದ್ದು, ಗುಣಮಟ್ಟದ ಅಕ್ಕಿಯನ್ನು ಒದಗಿಸುತ್ತೇವೆ ಎಂದು ಮೇಲ್ವಿಚಾರಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...