ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star
ಈ ಸಂದರ್ಭದಲ್ಲಿ ಭಕ್ತರು ಮತ್ತು ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸುರಕ್ಷತಾ ಕ್ರಮಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.



