ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

Date:

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದವನನ್ನು  ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. 

- Advertisement -

ಕಳೆದ ಒಂದೂವರೆ ತಿಂಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕನಾಗಿದ್ದ ಸತೀಶ್‌ ಪಾತ್ರಿ, ಮಹಿಳೆಯೊಬ್ಬರಿಗೆ ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ಅಲ್ಲದೆ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಬಲವಂತಪಡಿಸಿದ್ದ ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಘಟನೆಗೆ ಸಂಬಂಧಪಟ್ಟ ಸಂತ್ರಸ್ತ ಮಹಿಳೆ ಕೊಪ್ಪ ಪೊಲೀಸ್‌ ಠಾಣೆಗೆ ದೂರು ನೀಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದನು. ಆತನ ವಿರುದ್ಧ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್‌ ಠಾಣೆಗಳಲ್ಲಿ ಅತ್ಯಾಚಾರ ಹಾಗೂ ಮಾಟಮಂತ್ರ ನಿಷೇಧ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದವು.

ತನಿಖೆಯ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ವಿಚಾರವೂ ಬೆಳಕಿಗೆ ಬಂದಿದೆ. ಆರೋಪಿ ಸತೀಶ್ ಪಾತ್ರಿ, ತನಿಖೆಯ ವಿವಿಧ ಹಂತಗಳ ಮಾಹಿತಿಯನ್ನು ಎನ್‌.ಆ‌ರ್. ಪುರ ಪೊಲೀಸ್‌ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್‌ನಿಂದ ಮುಂಚಿತವಾಗಿ ಪಡೆಯುತ್ತಿದ್ದ ಎಂಬ ಆರೋಪವಿದೆ. ಪೊಲೀಸರು ಬಂಧನಕ್ಕೆ ತೆರಳುವ ಮುನ್ನವೇ ಆತ ಸ್ಥಳ ಬದಲಿಸಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

ಈ ಹಿನ್ನೆಲೆಯಲ್ಲಿ ಮಾಹಿತಿ ಸೋರಿಕೆ ಆರೋಪ ಎದುರಿಸಿದ ಕಾನ್‌ಸ್ಟೇಬಲ್‌ ಕಾಂತೇಶ್‌ನನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ನಾಯ್ಕಾ ಅವರು ಸೇವೆಯಿಂದ ಅಮಾನತುಗೊಳಿಸಿದ್ದರು ಎಂದು ವರದಿಯಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆಂಗಳೂರಿನ ಜೆ.ಪಿ. ನಗರದಲ್ಲಿ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಪ್ರಯತ್ನ: ಹುಣಸೂರಿನಲ್ಲಿ ಆಕ್ರೋಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ...

ಚಿಂತಾಮಣಿ | ಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ

ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ...

ಮರಾಠಿಗರ ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆ; ಜ್ಞಾನೇಶ್ವರ ಗುಡಿಯಾಳ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಬೆನ್ನಲ್ಲೇ ಹೊಸ ಚರ್ಚೆ

ಉತ್ತರ ಕನ್ನಡ: ಯಲ್ಲಾಪುರ–ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮಾಜದ ರಾಜಕೀಯ ಪ್ರಾತಿನಿಧ್ಯದ...

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು...