ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

Date:

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

- Advertisement -

ಮೃತ ವ್ಯಕ್ತಿ ಮಹಮ್ಮದ್ ಗೌಸ್ ಖಾನ್,  ಪತ್ನಿ ಫಾತಿಮಾ ಬಿ. ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೇಗೂರು ಗ್ರಾಮದ ರಸ್ತೆಯಲ್ಲಿ ಟ್ರ್ಯಾಕ್ಟರ್‌ ಮೂಲಕ ಮರವನ್ನು (ಟಿಂಬರ್) ಎಳೆಯಲು ಕಟ್ಟಲಾಗಿದ್ದ ಹಗ್ಗ ರಸ್ತೆಗೆ ಅಡ್ಡಲಾಗಿ ಇದ್ದ ಕಾರಣ, ಸ್ಕೂಟಿಯಲ್ಲಿ ಬರುತ್ತಿದ್ದ ಮಹಮ್ಮದ್ ಗೌಸ್ ಖಾನ್ ಅವರ ಕುತ್ತಿಗೆಗೆ ಅನಿರೀಕ್ಷಿತವಾಗಿ ಸಿಲುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಹಗ್ಗ ಸಿಲುಕಿದ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ದಂಪತಿ ರಸ್ತೆಗೆ ಬಿದ್ದಿದ್ದು, ಇಬ್ಬರಿಗೂ ತೀವ್ರ ಪೆಟ್ಟಾಗಿದೆ. ತಲೆ, ಕುತ್ತಿಗೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ಅದೇ ಮಾರ್ಗದಲ್ಲಿ ಹಿಂದೆ ಬೈಕ್‌ನಲ್ಲಿ ಬರುತ್ತಿದ್ದ ಅವರ ಸಂಬಂಧಿ

ಸಿಖಂದ‌ರ್ ಖಾನ್ ಅವರು ತಕ್ಷಣ ಸಹಾಯಕ್ಕೆ ಧಾವಿಸಿ, ಆಟೋ ಮೂಲಕ ದಂಪತಿಯನ್ನು ಚಿಕ್ಕಮಗಳೂರಿನ ಎಂ.ಜಿ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮಹಮ್ಮದ್ ಗೌಸ್ ಖಾನ್ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಈ ಸಂಬಂಧ ನಿರ್ಲಕ್ಷ್ಯ ತೋರಿದ ಟ್ರ್ಯಾಕ್ಟರ್ ಚಾಲಕ ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮೃತ ವ್ಯಕ್ತಿಯ ಪತ್ನಿ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...