ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ಪಡುತ್ತಿರುವ ನರಳಾಟವನ್ನು ಕಂಡು, ಶಾಲಾ ಮಕ್ಕಳು ತಾವೇ ಮುಂದೆ ನಿಂತು ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಪಾಠ ಕಲಿಸಿದ್ದಾರೆ.
ಕಳಸ – ಬಾಳೆಹೊನ್ನೂರು ಸಂಪರ್ಕ ರಸ್ತೆಯಲ್ಲಿ ಮಳೆ ಹಾಗೂ ನಿರ್ಲಕ್ಷ್ಯದಿಂದಾಗಿ ಹದಗೆಟ್ಟಿದ್ದ ಗುಂಡಿಗಳಲ್ಲಿ ದಿನನಿತ್ಯ ದ್ವಿಚಕ್ರ ವಾಹನ ಸವಾರರು, ಆಟೋ ಹಾಗೂ ಶಾಲಾ ವಾಹನಗಳು ಸಂಚರಿಸಲು ಹರಸಾಹಸ ಪಡುತ್ತಿದ್ದವು.
ಇದನ್ನೂ ಓದಿದ್ದೀರಾ?ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ
ಇದನ್ನು ಸಹಿಸದ ವಿದ್ಯಾರ್ಥಿಗಳು ತಮ್ಮ ಕೈಯಲ್ಲಿ ಗುದ್ದಲಿ, ಬಾಂಡ್ಲಿ ಹಿಡಿದು ಮಣ್ಣು ಮತ್ತು ಜಲ್ಲಿಯನ್ನು ತುಂಬಿ ಗುಂಡಿಗಳನ್ನು ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಆಡಳಿತ ವ್ಯವಸ್ಥೆಯ ಕಣ್ಣು ತೆರೆಸುವ ಈ ಮಕ್ಕಳ ಸಾಮಾಜಿಕ ಕಳಕಳಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.




