ಚಿಕ್ಕಮಗಳೂರು | ಷಣ್ಮುಖ ಆರ್ಮುಗಂ ಕುಟುಂಬ ಪಡೆದಿದ್ದ ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರ ರದ್ದು, ಡಿಸಿ ಆದೇಶ

Date:

Advertisements

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ನಿವಾಸಿ ಎ. ಷಣ್ಮುಖ ಎಸ್‌ ಆರ್ಮುಗಂ ಸಹೋದರರು ಮತ್ತು ಕುಟುಂಬ ವರ್ಗದವರು ಪಡೆದಿದ್ದ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ/ ನಾಯಕ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಜಾತಿ ಪರಿಶೀಲನಾ ಸಮಿತಿ ಅಧ್ಯಕ್ಷರಾದ ಮೀನಾ ನಾಗರಾಜ್‌ ಅವರು ಎ. ಷಣ್ಮುಖ ಎಸ್ ಆರ್ಮುಗಂ ಪ್ರಕರಣವನ್ನು ಪರಿಶೀಲಿಸಿ, ಆರ್ಮುಗಂ ಕುಟುಂಬವು ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ /ನಾಯಕ ಜಾತಿಗೆ ಸೇರಿರುವುದಿಲ್ಲವೆಂದು ಸ್ಪಷ್ಟವಾಗಿ ಕಂಡು ಬಂದ ಹಿನ್ನೆಲೆಯಲ್ಲಿ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ.

ಪ್ರಕರಣ ಹಿನ್ನೆಲೆ

Advertisements

ಎ. ಷಣ್ಮುಖ ಎಸ್‌ ಆರ್ಮುಗಂ ಕುಟುಂಬದವರು ತಮಿಳುನಾಡಿನಿಂದ ವಲಸೆ ಬಂದು, ಶಂಕರಘಟ್ಟದಲ್ಲಿ ವಾಸವಿದ್ದಾರೆ. ಸದರಿಯವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಎಂ.ಸಿ ಹಳ್ಳಿಯಲ್ಲಿ ನೆಲೆಸಿ ಪರಿಶಿಷ್ಟ ವರ್ಗದ ವಾಲ್ಮೀಕಿ ನಾಯಕ /ನಾಯಕ ಜಾತಿ ಪ್ರಮಾಣ ಪತ್ರ ಪಡೆದು ನಿಜವಾಗಿ ಅರ್ಹರಿರುವ ಪರಿಶಿಷ್ಟ ವರ್ಗದ ಜನಾಂಗಕ್ಕೆ ಮೋಸಮಾಡಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಜಿ.ಕೆ. ಭೀಮಪ್ಪ ಆರೋಪಿಸಿ ಕ್ರಮಕೈಗೊಳ್ಳಲು ಸಮಿತಿಗೆ ದೂರು ನೀಡಿದ್ದರು.

ಷಣ್ಮುಕ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ...

Download Eedina App Android / iOS

X