ಚಿಕ್ಕಮಗಳೂರು | ವಿದ್ಯಾರ್ಥಿಗಳು ಉತ್ತಮ ಆಹಾರ, ಜೀವನಶೈಲಿ ರೂಢಿಸಿಕೊಳ್ಳಬೇಕು; ಬಸವ ಮರುಳಸಿದ್ದ ಸ್ವಾಮೀಜಿ

Date:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶನಿವಾರ ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ವಿದ್ಯಾರ್ಥಿಗಳು ಉತ್ತಮ ಆಹಾರ ಹಾಗೂ ಜೀವನಶೈಲಿ ರೂಢಿಸಿಕೊಳ್ಳಬೇಕು. ಸ್ಥಳೀಯ ಆಹಾರ ಪದ್ಧತಿಗೆ ಆದ್ಯತೆ ನೀಡಬೇಕು. ವಿದೇಶಿ ಆಹಾರ ಪದ್ಧತಿ ರುಚಿಕರವಾಗಿದ್ದರೂ ನಿರಂತರ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ವಿಶ್ವವಿದ್ಯಾಲಯಗಳಲ್ಲಿ ಪಡೆದ ಪದವಿಗಳು ಮಾತ್ರ ಜೀವನದಲ್ಲಿ ಯಶಸ್ಸು ತಂದುಕೊಡುವುದಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಬದುಕಿನ ಕೌಶಲ ಬೆಳೆಸಿಕೊಳ್ಳಬೇಕು ಎಂದು ಬಸವ ತತ್ವಪೀಠದ ಪೀಠಾಧ್ಯಕ್ಷ ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಐಟಿ ಕಾಲೇಜಿನ ಪ್ರಾಂಶುಪಾಲ ಗೌತಮ್ ಮಾತನಾಡಿ, ಓದುವ ಹವ್ಯಾಸ ಬೆಳೆಸಿಕೊಂಡವರು ಜ್ಞಾನದಲ್ಲಿ ಮುನ್ನಡೆಯುತ್ತಾರೆ. ಪೋಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜತೆಗೆ ಅವರ ಕೌಶಲಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಾಗೆಯೇ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ, ಡಿವಿಜಿ ಕಗ್ಗ ಉಪನ್ಯಾಸ ಖ್ಯಾತಿಯ ಜಿ.ಎಸ್. ನಟೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜು, ಲೋಕೇಶ್, ರಾಮಕೃಷ್ಣ, ಕುಮಾರಸ್ವಾಮಿ, ಪದ್ಮರಾಜ್, ಪೂರ್ಣೇಶ್, ಅನಂತ್, ನಾಗೇಶ್, ಪುಟ್ಟಸ್ವಾಮಿ ಹಾಗೂ ಮಂಜುನಾಥಸ್ವಾಮಿ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...