ಸಬ್ ಇನ್ಸ್‌ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದಿದೆ.
ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿರುವ ತಿಪ್ಪೇಶ್ ಎಂಬುವರ ಪತ್ನಿ ಪದ್ಮ (34) ಕಳೆದ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಬೇಸಿಗೆ ರಜೆ ಇರುವುದರಿಂದ ಮಕ್ಕಳನ್ನು ಊರಿಗೆ ಕಳುಹಿಸುವಂತೆ ಪದ್ಮ ಪತಿಯ ಬಳಿ ಕೇಳಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ದಂಪತಿಯ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಪತಿಯು ಊರಿಗೆ ಕಳುಹಿಸಲು ನಿರಾಕರಿಸಿದ್ದರಿಂದ ಮನನೊಂದ ಪದ್ಮ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಮದುವೆಗೆ ವಧು ಸಿಗದೆ ಯುವಕ ಸಾವು
ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





