ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ನಡೆದಿದೆ.
ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ ಹಾಗೂ ಅರುಣ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿದಾಗ ಶೇಷಗಿರಿ ಎಂಬಾತ ಅರುಣ್‌ನ ಮೇಲೆ ಏಕಾಏಕಿ ಲಾಂಗ್‌ನಿಂದ ದಾಳಿ ನಡೆಸಿದ್ದಾನೆ. ಶೇಷಗಿರಿ ಬೀಸಿದ ಲಾಂಗ್‌ನಿಂದ ತಪ್ಪಿಸಿಕೊಳ್ಳಲು ಅರುಣ್ ತನ್ನ ಕೈಯನ್ನು ಅಡ್ಡ ಕೊಟ್ಟಿದ್ದು, ಈ ವೇಳೆ ಅರುಣ್‌ನ ಹಸ್ತ ಸಂಪೂರ್ಣವಾಗಿ ಕತ್ತರಿಸಿ ತುಂಡಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಅರುಣ್‌ನನ್ನು ತಕ್ಷಣವೇ ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಗಾಯ ಅತ್ಯಂತ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವ್ಯಕ್ತಿಯನ್ನು ಮಂಗಳೂರಿಗೆ ರವಾನಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮನನೊಂದು ಯುವಕ ಸಾವು
ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಮುಂದುವರಿಸಿದ್ದಾರೆ.




