ಚಿಕ್ಕಮಗಳೂರು | ಮೀನು‌ ಹಿಡಿಯಲು ಹೋಗಿ ಕೆರೆಯಲ್ಲಿ ಇಬ್ಬರು ಮುಳುಗಿ ಸಾವು

Date:

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಸಂಭವಿಸಿದೆ.

- Advertisement -

27 ವರ್ಷದ ರಮೇಶ್ ಹಾಗೂ 36 ವರ್ಷದ ಮಹೇಶ್ ಮೃತ ದುರ್ದೈವಿಗಳು. ಇವರಿಬ್ಬರೂ ಶನಿವಾರ ಸಂಜೆ ಮೀನು ಹಿಡಿಯಲೆಂದು ಕೆರೆಗೆ ತೆರಳಿದ್ದು, ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಇಂದು ಬೆಳಿಗ್ಗೆ ಕೆರೆಯ ಬಳಿ ಶೋಧ ನಡೆಸಿದಾಗ ಅವರು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಮೀನು ಹಿಡಿಯುವ ವೇಳೆ ಕಾಲು ಜಾರಿ ಕೆರೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ನೀರಿನಲ್ಲಿ ಮುಳುಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ನರಸಿಂಹರಾಜಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ನಿತಿನ್ ಎಂಬುವವರು ಸಾವನ್ನಪ್ಪಿದ ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಒಟ್ಟು ಮೂವರು ನೀರು ಪಾಲಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...