ಚಿಕ್ಕಮಗಳೂರು | ಕಾಡು ಪ್ರಾಣಿ ಬೇಟೆ; ಆರೋಪಿಗಳು ಸೆರೆ 

Date:

ಕಾಡು ಪ್ರಾಣಿಗಳ ಬೇಟೆಗೆಂದು ಅಕ್ರಮ ಶಸ್ತ್ರಾಸ್ತ್ರಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ 7 ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. 

- Advertisement -

ಸಿಂಗಟಗೆರೆ ಹೋಬಳಿಯ ಮಲ್ಲಾಘಟ್ಟ ರಸ್ತೆಯಲ್ಲಿ ಪೊಲೀಸ್ ಸಿಬ್ಬಂದಿಗಳು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಅನುಮಾನಾಸ್ಪದವಾಗಿ ಬಂದ ಕೆಎ-18/ಬಿ-6332 ಸಂಖ್ಯೆಯ ಬುಲೆರೋ ಪಿಕಪ್ ವಾಹನವನ್ನು ತಡೆದು ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ. ಸಿಂಗಲ್ ಬ್ಯಾರೆಲ್ ಬಂದೂಕುಗಳು, 25 ಜೀವಂತ ಕಾಟ್ರೇಜ್‌ಗಳು (ಮದ್ದುಗುಂಡು), ತಲೆಗೆ ಧರಿಸುವ ಹಣೆ ಬ್ಯಾಟರಿಗಳು ಹಾಗೂ ದಟ್ಟ ಕತ್ತಲಲ್ಲೂ ಪ್ರಾಣಿಗಳನ್ನು ಗುರುತಿಸಬಲ್ಲ 02 ದೊಡ್ಡ ಫೋಕಸ್ ಲೈಟ್‌ಗಳು ಪತ್ತೆಯಾಗಿವೆ. ವಿಚಾರಣೆಗೆ ಒಳಪಡಿಸಿದಾಗ, ಇವರೆಲ್ಲರೂ ಕಾಡು ಹಂದಿಗಳನ್ನು ಬೇಟೆಯಾಡಲು ಬಂದಿದ್ವಿ ಎಂದಿದ್ದಾರೆ. ಬಂಧಿತ ಆರೋಪಿಗಳು ಮೂಡಿಗೆರೆ ಕಸಬಾ ಹೋಬಳಿ ಬಿದರಹಳ್ಳಿಯ ಗಂಧನ್ ಜಿ.ಎಂ, ಗೌತಮ್ ಜಿ.ಎಂ, ಬಣಕಲ್ ಹೋಬಳಿ ಕುಂದೂರು ಗ್ರಾಮದ ಸಚ್ಚಿನ್ಎಸ್.ಎಂ, ಅಭಿಷೇಕ್ ಎಸ್.ಎಂ, ದರ್ಶನ ಗ್ರಾಮದ ಸಂಜೀವ್ ಕುಮಾರ್, ನೂತನ ಡಿ.ಎಸ್ ಹಾಗೂ ಕಡೂರು ತಾಲ್ಲೂಕು ಯಗಟಿ ಹೋಬಳಿಯ ಮುಗಳಿಕಟ್ಟೆ ಗೇಟ್ ನಿವಾಸಿ ದೇವರಾಜ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಯುವತಿ ಮೇಲೆ ದೇವಸ್ಥಾನ ಅರ್ಚಕನಿಂದ ಅತ್ಯಾಚಾರ: ಪ್ರಕರಣ ದಾಖಲು 

ಈ ಕುರಿತು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸಿ, ವನ್ಯಜೀವಿಗಳ ಬೇಟೆಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಸಿಂಗಟಗೆರೆ ಪೊಲೀಸ್‌ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಕಲಂ 3, 20, 25 ಆರ್ಮ್ಸ್ ಆಕ್ಟ್ ಹಾಗೂ 3(5) ಬಿಎನ್‌ಎಸ್‌ ಅಡಿ ಗಂಭೀರ ಮೊಕದ್ದಮೆ ದಾಖಲಿಸಲಾಗಿದೆ. ಸದ್ಯ ಎಲ್ಲ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...