ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹಿನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಕಾಡಾನೆ ದಾಳಿಗೆ ಸಾವನಪ್ಪಿದ್ದರು. ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ, 25 ಲಕ್ಷದ ಪರಿಹಾರ ಚೆಕ್ಕನ್ನು ಕುಟುಂಬಕ್ಕೆ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ನೀಡಿದ್ದಾರೆ.
ಕಾಡಾನೆಗಳ ದಾಳಿಯಿಂದ ರೈತರ ಜೀವ ಹಾಗೂ ಬೆಳೆಗಳಿಗೆ ನಿರಂತರವಾಗಿ ಉಂಟಾಗುತ್ತಿರುವ ಅಪಾಯದ ಕುರಿತು ಕಳವಳ ವ್ಯಕ್ತಪಡಿಸಿದ ಮಾನ್ಯ ಶಾಸಕರು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ
ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ ಅರಣ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ



