ಚಿಕ್ಕಮಗಳೂರು | ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ

Date:

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯದಲ್ಲಿ ನಡೆದಿದೆ.

- Advertisement -

ಸಿದ್ದರಾಮಯ್ಯ ಸೇತುವೆ ಸಮೀಪದ ಮೋರಿಮಠ ಆಸುಪಾಸಿನ ಹೆಬ್ಬೆ ವಲಯದ ಕಲ್ಲುಕೊವೆ ಗ್ರಾಮದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಭದ್ರಾ ಬ್ಯಾಕ್‌ ವಾಟರ್ ಪ್ರದೇಶದಲ್ಲಿ ಬೀಡು ಬಿಟ್ಟಿರುವ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನ ಚಲನವಲನದ ಮೇಲೆ ನಿಗಾ ವಹಿಸುತ್ತಿದ್ದ ವೇಳೆ ಏಕಾಏಕಿ ಆನೆಗಳು ದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ದಾಳಿಯಲ್ಲಿ ಅರಣ್ಯ ವೀಕ್ಷಕರಾದ ಹರೀಶ್, ಬಸವರಾಜ್ ಗಾಯಗೊಂಡಿದ್ದಾರೆ. ಹರೀಶ್ ಅವರಿಗೆ ಬೆನ್ನು ಮೂಳೆಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು, ಬಸವರಾಜ್ ಅವರಿಗೆ ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಅರಣ್ಯ ವೀಕ್ಷಕ ಹರೀಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಪೈನಲ್ ಕಾರ್ಡ್‌ಗೆ ತೀವ್ರ ಪೆಟ್ಟು ಬಿದ್ದಿರುವ ಕಾರಣ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನಾಲ್ಕು ಗಂಟೆಗಳೊಳಗೆ ಸ್ಥಳಾಂತರಿಸುವಂತೆ ವೈದ್ಯರು ಸೂಚನೆ ನೀಡಿದ್ದರಿಂದಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಭದ್ರಾ ಅಭಯಾರಣ್ಯದ ಹೆಬ್ಬೆ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಿಂಡು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಎನ್ ಆರ್ ಪುರ ಪಟ್ಟಣದಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಬೀಡು ಬಿಟ್ಟಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ಗಸ್ತು ಮತ್ತು ನಿಗಾ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿದ್ದೀರಾ? ಎತ್ತಿನಹೊಳೆ ಹೆಸರಲ್ಲಿ ಮತ್ತೊಂದು ಧೋಖಾ: ಬೃಹತ್ ಕೈಗಾರಿಕಾ‌ ಕಾಮಗಾರಿಗಳಿಗೆ ನೀರೊದಗಿಸುವ ಟೆಂಡರ್

ಘಟನೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಕಾಡಾನೆಗಳ ಚಲನವಲನದ ಮೇಲೆ ಹೆಚ್ಚಿನ ನಿಗಾ ವಹಿಸಲು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855...

ಬೀದರ್ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಸಿಎಂಗೆ ರೈತ ನಿಯೋಗ ಭೇಟಿ

ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ...

ಬೀದರ್‌ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ...