ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಗ್ರಾವಿಟಿ ಮೂಲಕ ತೆಗೆದುಕೊಂಡು ಹೋಗುವುದರಿಂದ ನಾಲಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಭಿಪ್ರಾಯ ಪಟ್ಟಿದೆ.

ಇತ್ತೀಚೆಗೆ ತಾನೇ ನಾಲೆಯಿಂದ ಕುಡಿಯುವ ನೀರಿನ ಘಟಕಕ್ಕೆ ನೀರು ಹರಿಸುವ ಕೆಲಸವನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಆರಂಭಿಸಲಾಗಿತ್ತು. ಇದರ ಹಿಂದೆ ಕೆಲ ರೈತರ ಆಕ್ಷೇಪ ವ್ಯಕ್ತವಾಗಿತ್ತು.
ನೀರಾವರಿ ಇಲಾಖೆ ಇಂಜಿನಿಯರ್‌ಗಳು ಭದ್ರಾ ಬಲದಂಡೆ ನಾಲೆಯ ಮೂಲಕ ಬಿಆರ್‌ಪಿನಲ್ಲಿರುವ ಶುದ್ಧೀಕರಣ ಘಟಕಕ್ಕೆ ಕುಡಿಯುವ ನೀರಿಗಾಗಿ 30 ಕ್ಯೂಸೆಕ್ ನೀರು ತೆಗೆದುಕೊಂಡು ಹೋಗುವುದರಿಂದ ನಾಲೆಗೆ ತೊಂದರೆ ಇಲ್ಲ ಎಂದು ತಜ್ಞರ ತಂಡ ಅಭಿಪ್ರಾಯಪಟ್ಟಿದೆ ಎಂದು ಚಿತ್ರದುರ್ಗ ಮುಖ್ಯ ಅಭಿಯಂತರರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
ನಾಲೆಯನ್ನು ಸೀಳಿ ಅದಕ್ಕೆ ಸಂಪರ್ಕ ಕಲ್ಪಿಸಿಕೊಂಡು ಹೊಸದುರ್ಗ ತಾಲೂಕಿನ 346 ಗ್ರಾಮ ಅಜ್ಜಂಪುರ ಹಾಗೂ ತರೀಕೆರೆ ತಾಲೂಕಿನ 172 ಗ್ರಾಮಗಳಿಗೆ ನೀರು ತೆಗೆದುಕೊಂಡು ಹೋಗಲು ರೂಪಿಸಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ದಾವಣಗೆರೆ ಅಚ್ಚುಕಟ್ಟು ಪ್ರದೇಶದ ಕೆಲವು ರೈತರು ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಮಗಾರಿ ನಿಲ್ಲಿಸಿದ ಸರ್ಕಾರ ಯೋಜನೆ ಬಗ್ಗೆ ರೈತರ ಒತ್ತಡಕ್ಕೆ ಮಣಿದು ಭಾರತೀಯ ವಿಜ್ಞಾನ ಸಂಸ್ಥೆಯ ಇಂಜಿನಿಯರ್ ಗಳ ತಂಡಕ್ಕೆ ಪರಿಶೀಲಿಸಿ ವರದಿ ಸಲ್ಲಿಸಲು ತಿಳಿಸಿದ್ದರು. ಅದರಂತೆ ಪರಿಶೀಲನೆ ನಡೆಸಿದ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ತಂಡ ಇಡೀ ಕಾಮಗಾರಿ ವೈಜ್ಞಾನಿಕವಾಗಿದ್ದು, ಇದರಿಂದ ಜಲಾಶಯ ಅಥವಾ ನಾಲೆಗೆ ಯಾವುದೇ ತೊಂದರೆ ಇಲ್ಲ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಂಡ ಕಾಮಗಾರಿಗೆ ಹಸಿರು ನಿಶಾನೆ ತೋರಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದೆ.

ಭಾರತೀಯ ವಿಜ್ಞಾನ ಸಂಸ್ಥೆಯ ತಂಡದ ವರದಿ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಾಮಗಾರಿ ಇಂದಿನಿಂದ ಪುನರಾರಂಭ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸೈನಿಕ ಹುಳುಗಳ ಹಾವಳಿಗೆ ನಲುಗಿದ ಮೆಕ್ಕೆಜೋಳ; ರೈತರ ನೆರವಿಗೆ ಬರಬೇಕಿದೆ ಕೃಷಿ ವಿಜ್ಞಾನ, ಸರ್ಕಾರ
ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಉದ್ದೇಶಕ್ಕೆ 30 ಕ್ಯೂಸೆಕ್ ಹರಿಸುವುದರಿಂದ ಕೊನೆಯ ಭಾಗದ ರೈತರಿಗೆ ನೀರು ಹರಿಯಲು ಯಾವುದೇ ತೊಂದರೆ ಆಗುವುದಿಲ್ಲ. ತಾಂತ್ರಿಕವಾಗಿ ಹೆಚ್ಚು ನೀರನ್ನು ಶುದ್ಧೀಕರಣ ಘಟಕಕ್ಕೂ ತೆಗೆದುಕೊಂಡು ಹೋಗಲಾಗುವುದಿಲ್ಲ. ಹೀಗಾಗಿ ರೈತರು ಅನಗತ್ಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಇಂಜಿನಿಯರ್‌ಗಳು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಜುಲೈ 15ಕ್ಕೆ ನೀರು ಹರಿಸಬೇಕು. ಅಷ್ಟರಲ್ಲಿ ಕಾಮಗಾರಿ ಮುಗಿಯಬೇಕು ಎಂದು ದಾವಣಗೆರೆಯ ಹೋರಾಟಗಾರರು ಒತ್ತಡ ಹೇರಿದ್ದರು. ಮಳೆಯ ಪ್ರಮಾಣ, ಜಲಾಶಯದ ನೀರಿನ ಮಟ್ಟ ನೋಡಿಕೊಂಡು,
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾಡಾ) ಐಸಿಸಿ ಸಭೆ ನಡೆಸಿ ಕಳೆದ ವರ್ಷ ಜುಲೈ 29ಕ್ಕೆ ನಾಲೆಗೆ ನೀರು ಹರಿಸಿತ್ತು. ಕಾಮಗಾರಿ ಹಿನ್ನೆಲೆಯಲ್ಲಿ ಈ ಬಾರಿ ಯಾವಾಗ ನೀರು ಹರಿಸಲಿದೆ ತೀರ್ಮಾನಿಸಬೇಕಾಗಿದೆ.