ದಾವಣಗೆರೆಯಲ್ಲಿ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ; ಜಾತಿ ಮಠಗಳ ಹೇಳಿಕೆಗೆ ರಂಭಾಪುರಿ ಶ್ರೀ ಸ್ಪಷ್ಟನೆ

Date:

Advertisements

“ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆಯೇ ಹೊರತು, ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ” ಎಂದು ರಂಭಾಪುರಿ ಶ್ರೀಗಳು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

IMG 20250728 WA0271
ಹಿಂದುಳಿದ ವರ್ಗಗಳ ಮಠಾಧೀಶರ ಸಭೆ

ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ಬಾಳೆಹೊನ್ನೂರು ರಂಭಾಪುರಿ ಶ್ರೀ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಾಭದ್ರಾ ನದಿ ಅಪಾಯದ ಮಟ್ಟ; ಜನ, ಜಾನುವಾರು ನದಿಗೆ ಇಳಿಸದಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

‘ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ ತಾಲೂಕಾ ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿದ್ದಾರೆಂದು ತಿಳಿದುಬಂದಿದೆ.‌ ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ. ದಲಿತ ಹಿಂದುಳಿದ ಮಠಾಧೀಶರು ತಪ್ಪು ಗ್ರಹಿಕೆ ಮಾಡಿಕೊಂಡು ಗೋಷ್ಠಿ ನಡೆಸಿರುವುದಕ್ಕೆ ವಿಷಾಧಿಸುತ್ತೇವೆ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲಿ, ಅಲ್ಲ ಸಲ್ಲದ ಮಾತುಗಳಿಲ್ಲವೆಂಬುದನ್ನು ಸ್ಪಷ್ಟಪಡಿಸುತ್ತೇವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X