ಚಿಕ್ಕಮಗಳೂರು | ಗೊಲ್ಲರ ಬೀದಿಗೆ ಹೋದ ದಲಿತ ಯುವಕನ ಮೇಲೆ ಹಲ್ಲೆ

Date:

ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ ಗ್ರಾಮದ ಮಾದಿಗ ಸಮುದಾಯದ ಯುವಕ ಮಾರುತಿ ಎಂಬವರ ಮೇಲೆ ಗೇರುಮರಡಿ ಗ್ರಾಮದ ಗೊಲ್ಲ ಸಮುದಾಯದ ಗುಂಪೊಂದು ಹಲ್ಲೆ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜೆಸಿಬಿ ನಿರ್ವಹಣೆ ಕೆಲಸ ಮಾಡುತ್ತಿದ್ದ ಮಾರುತಿ, ಇತ್ತೀಚೆಗೆ ಗೇರುಮರಡಿ ಗ್ರಾಮದ ರವಿ ಎಂಬವರ ಹಳೆ ಮನೆ ಕೆಡವುವ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುವಾಗ ಜೆಸಿಬಿ ತಗುಲಿ ಡಿಶ್‌ ವೈರ್ ತುಂಡಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಆತನ ಮೇಲೆ ಹಲ್ಲೆ ಮಾಡಲಾಗಿದೆ.

ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ಬಂದ 30-40 ಜನರ ಗುಂಪು, ಮಾದಿಗ ಸಮುದಾಯವರು ನಮ್ಮ ಬೀದಿಗೆ ಯಾಕೆ ಬಂದಿದ್ದೀರಿ. ನೀವು ಬಂದರೆ ನಮ್ಮ ದೇವರಿಗೆ ಮೈಲಿಗೆಯಾಗುತ್ತದೆ ಎಂದು ಜೆಸಿಬಿ ಮೇಲೆ ಹತ್ತಿ ಹಲ್ಲೆ ಮಾಡಿದೆ. ಕೆಲವರು ಚಪ್ಪಲಿ ಹಾಕಿದ್ದ ಕಾಲಿನಿಂದ ಒದ್ದಿದ್ದಾರೆ ಎಂದು ವರದಿಯಾಗಿದೆ.

ತನ್ನ ಮೇಲಾದ ಹಲ್ಲೆಯ ಬಗ್ಗೆ ಮಾರುತಿ ತರೀಕೆರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಗಾಯಗೊಂಡು ಅಸ್ವಸ್ಥನಾಗಿ ಕುಸಿದು ಬಿದ್ದರೂ, ಯಾರು ನೀರು ಕೊಟ್ಟಿಲ್ಲ. ಅಲ್ಲದೆ, ಜೇಬಿನಲ್ಲಿದ್ದ 20,000 ರೂಪಾಯಿಯನ್ನು ಕಸಿದುಕೊಂಡಿದ್ದಾರೆ. 1 ಲಕ್ಷ ರೂ. ದಂಡ ಕಟ್ಟಬೇಕು. ಇಲ್ಲವಾದಲ್ಲಿ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಾರುತಿ ನೀಡಿದ ದೂರಿನ ಆಧಾರದ ಮೇಲೆ ಗೊಲ್ಲ ಸಮುದಾಯದ 15 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...