ಕುದುರೆಮುಖ | ಪುನರ್ವಸತಿಗೆ 20 ಕೋಟಿ ಹಂಚಿಕೆ: ಸಚಿವ ಈಶ್ವರ ಖಂಡ್ರೆ

Date:

ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಕುದುರೆಮುಖ ಪುರ್ವಸತಿಗೆ 20 ಕೋಟಿ ವಿನಿಯೋಗಿಸಲಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಇಂದು ಮಂಗಳೂರಿನಲ್ಲಿ ನಡೆದ ಗೇರುಮೇಳದಲ್ಲಿ, “ಕೆರೆಕಟ್ಟೆ ಪ್ರದೇಶ ಸೇರಿದಂತೆ ಕುದುರೆಮುಖ ಅರಣ್ಯದಿಂದ ಸ್ವಯಂ ಪ್ರೇರಿತರಾಗಿ ಹೊರಬರಲು ಅರ್ಜಿ ಸಲ್ಲಿಸಿದ್ದ 5 ಕುಟುಂಬಗಳಿಗೆ 2.38 ಕೋಟಿ ರೂ. ಮೊತ್ತದ ಚೆಕ್ ವಿತರಿಸಿ ಮಾತನಾಡಿ, “ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದಾಗ, ಪುಂಡಾನೆಯನ್ನು ಸೆರೆ ಹಿಡಿಯಲು ಸೂಚನೆ ನೀಡಲಾಗಿತ್ತು. ಆನೆ ಸೆರೆ ಸಂಪೂರ್ಣ ಪರಿಹಾರವಲ್ಲ ಎಂಬುದನ್ನು ಮನಗಂಡು ಅರಣ್ಯದೊಳಗಿನ ಜನರ ಸ್ಥಳಾಂತರದ ಮೂಲಕ ಅರಣ್ಯ ಪ್ರದೇಶ ವಿಸ್ತರಣೆ, ಸಂರಕ್ಷಣೆ ಮಾಡಲು ಸರ್ಕಾರ ಕ್ರಮ ವಹಿಸಲಾಗುತ್ತದೆ” ಎಂದಿದ್ದಾರೆ.

“ಕುದುರೆಮುಖ ಅರಣ್ಯದೊಳಗೆ 1300 ಪರಿವಾರಗಳಿದ್ದವು, 350 ಕುಟುಂಬಗಳಿಗೆ ಪರಿಹಾರ ನೀಡಿದೆ ಸ್ಥಳಾಂತರಿಸಲಾಗಿದೆ. ಇನ್ನೂ 300 ಕುಟುಂಬಗಳು ಸ್ವಯಂ ಇಚ್ಛೆಯಿಂದ ಸ್ಥಳಾಂತರಗೊಳ್ಳಲು ಅರ್ಜಿ ಸಲ್ಲಿಸಿದ್ದು, ಹಂತ ಹಂತವಾಗಿ ಪುನರ್ವಸತಿ ಯೋಜನೆ ಜಾರಿಗೆ ತರಲಾಗುವುದು ಎಂದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಹೊರಗುತ್ತಿಗೆ ಕೆಲಸ ಕಲ್ಪಿಸಿ ಕೊಡಲಾಗುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಹೋದ ಜೀವ ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರನ್ನು ಆಶ್ರಯಿಸಿದ್ದ ಕುಟುಂಬಗಳಿಗೆ ಆಸರೆಯಾಗಲು ಸರ್ಕಾರ ವನ್ಯಜೀವಿ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ 20 ಲಕ್ಷ ರೂಪಾಯಿ ಪರಿಹಾರ ನೀಡಿದೆ” ಎಂದು ತಿಳಿಸಿದರು.

“ಬಹಳ ವರ್ಷದಿಂದ ಅರ್ಜಿ ಹಾಕಿ ಕಾಯುತ್ತಿದ್ದ ಅರಣ್ಯದೊಳಗಿನ ವಸತಿ ಪ್ರದೇಶಗಳ ಸ್ಥಳಾಂತರ ಯೋಜನೆಯನ್ನು ಆರ್ಥಿಕ ಲಭ್ಯತೆಯ ಇತಿಮಿತಿಯಲ್ಲಿ ಪುನಾರಂಭಿಸಲು ನಿರ್ಧರಿಸಲಾಗಿದ್ದು. ಈ ಬಗ್ಗೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಗೆ ಬರಲು ಅರ್ಜಿ ಸಲ್ಲಿಸಿರುವ ಕುಟುಂಬಗಳನ್ನು ಸ್ಥಳಾಂತರಿಸಲು ಸೂಚಿಸಿದ್ದೆವು, ಇಂದು 5 ಕುಟುಂಬಕ್ಕೆ ಚೆಕ್ ನೀಡಲಾಗಿದೆ. ಪುನರ್ವಸತಿ ಯೋಜನೆಗೆ ಹೆಚ್ಚುವರಿ ಜೊತೆಗೆ 20 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ> ಕುದುರೆಮುಖ ಕಾಡ್ಗಿಚ್ಚು: ಬೆಂಕಿ ಹಚ್ಚುವುದರಿಂದ ಲಾಭ ಯಾರಿಗೆ?

- Advertisement -

“ಕೆರೆಕಟ್ಟೆಯ ಮುಡಬಿಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದ ಸ್ಥಿತಿಯನ್ನು ಪರಿಗಣಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಆ ಕುಟುಂಬದ ಇಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಅರಣ್ಯ ಇಲಾಖೆಯಲ್ಲಿ ಉದ್ಯೋಗವನ್ನೂ ನೀಡಲಾಗಿದೆ. ವನ ಪ್ರದೇಶದಲ್ಲಿ ಇರುವ ಜಿಲ್ಲೆಗಳಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿದೆ. ಮಂಗಳೂರು ಭಾಗದಲ್ಲೂ ಈ ಸಮಸ್ಯೆ ಇದ್ದು, ತಾನು ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಸಮರ್ಪಿತ ಆನೆ ಕಾರ್ಯಪಡೆ ಮಂಜೂರು ಮಾಡಲಾಗಿದ್ದು, 25 ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸುತ್ತಿದ್ದೇವೆ. ಕಾಡಿನಲ್ಲಿ ವನ್ಯ ಜೀವಿಗಳಿಗೆ ನೀರು, ಆಹಾರದ ಕೊರತೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಸಿಬ್ಬಂದಿ ನೇಮಕಾತಿ ಮಾಡುತ್ತಿದ್ದೇವೆ. ಕಮಾಂಡ್ ಸೆಂಟರ್ ಆರಂಭಿಸಿದ್ದೇವೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಜೇಗೌಡ, ಅಶೋಕ್ ಕುಮಾರ್ ರೈ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್ ಗಟ್ಟಿ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...