ಮೂಡಿಗೆರೆ | ಅಪಘಾತ: ಮೂವರು ಸಾವು; ಇಬ್ಬರಿಗೆ ಗಂಭೀರ 

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ ಜ್ಞಾನೇಶ, ಮೋಹನ ಮತ್ತು ಗುರುಕಿರಣ್ ಮೃತ ಯುವಕರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮೃತರು ಮತ್ತು ಗಾಯಾಳುಗಳು ತುಮಕೂರಿನಿಂದ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ಹಾದುಹೋಗುವ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಂತರದಿಂದ ಬಚಾವಾದ ಬೈಕ್ ಸವಾರ 

ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...