ಕೆಸ ಸೊಪ್ಪಿಗಾಗಿ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
- Advertisement -
ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (70) ಮೃತರು. ಶುಕ್ರವಾರ ಬೆಳಿಗ್ಗೆ ಹೇಮಾವತಿ ನದಿ ತೀರದಲ್ಲಿ ನಡೆದು ಹೋಗುವ ವೇಳೆ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ನದಿಯಲ್ಲಿ ಶವ ಪತ್ತೆಯಾಗಿದೆ.
ಇದನ್ನೂ ಓದಿದ್ದೀರಾ?ಬೇಲೂರು | ರಸ್ತೆ ಅಪಘಾತ; ಅರ್ಚಕ ಸಾವು
ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ





