ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ವ್ಯಾಪ್ತಿಯ ಬಣಕಲ್ ಸಮೀಪ ಮಲ್ಲನಾಡ್ ಕೆಫೆ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಮೂಡಿಗೆರೆ ಕಡೆಗೆ ಸಂಚರಿಸುತ್ತಿದ್ದ ಐಟ್ವೆಂಟಿ ಕಾರು, ಮಲ್ಲನಾಡ್ ಕೆಫೆ ಬಳಿ ಏಕಾಏಕಿ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿದ್ದೀರಾ?ಹಾಸನ | ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ; ‘ಜಾತಿ ವಿನಾಶ’ ಕೃತಿ ಸಾಮೂಹಿಕ ಓದು, ವಿಶ್ಲೇಷಣೆ
ಅಪಘಾತದ ತೀವ್ರತೆಗೆ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಪೊಲೀಸರು ಪರಿಶೀಳಿಸಿದ್ದಾರೆ.




