ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಸಮಯಪ್ರಜ್ಞೆ ಮೆರೆದು ಮಾನವೀಯತೆ ತೋರಿದ್ದಾರೆ.
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.

ಅದೇ ಸಮಯದಲ್ಲಿ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ್ಮ ಅವರು ಅಪಘಾತವನ್ನು ಕಂಡು ಕೂಡಲೇ ವಾಹನ ನಿಲ್ಲಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು, ಕ್ಷಣವೂ ತಡಮಾಡದೆ ತಮ್ಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಗಾಯಾಳುಗಳನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಒಡೆದು ಹೋದ ಮನಸ್ಸುಗಳನ್ನ ಒಗ್ಗೂಡಿಸುವುದೇ ಸರ್ವ ಸಮಜೋತ್ಸವ; ಅನಿಲ್ ಹೊಸಕೊಪ್ಪ
ಗಾಯಾಳುಗಳ ಮೈಯಿಂದ ಅತಿಯಾದ ರಕ್ತಸ್ರಾವವಾಗುತ್ತಿದ್ದ ಕಾರಣ ಶಾಸಕರ ಅಧಿಕೃತ ಕಾರು ಸಂಪೂರ್ಣ ರಕ್ತಮಯವಾಗಿತ್ತು. ಆದರೂ ಶಿಷ್ಟಾಚಾರ (Protocol) ಅಥವಾ ವಾಹನದ ಬಗ್ಗೆ ಯೋಚಿಸದೆ, ಜೀವ ಉಳಿಸುವುದೇ ಮುಖ್ಯ ಎಂದು ಶಾಸಕರು ತೋರಿದ ಈ ಕಾಳಜಿ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದಾರೆ.





