Naxal Surrender | ಮುಖ್ಯವಾಹಿನಿಗೆ ಆರು ನಕ್ಸಲರು; ಮಾವೋವಾದಿ ನಾಯಕಿ ಮುಂಡಗಾರು ಲತಾ ಹೇಳಿದ್ದೇನು?

Date:

Advertisements

ನಕ್ಸಲ್ ಶರಣಾಗತಿ ರಾಜ್ಯ ಸರ್ಕಾರ ಕರೆ ನೀಡಿದ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆ.

ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ತೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ.

ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.

Advertisements

ಮುಂಡಗಾರು ಲತಾ ಅವರು ಮುಖ್ಯವಾಹಿನಿಗೆ ಬರುವ ಕುರಿತು ಸಮಿತಿ ಸದಸ್ಯರ ಮುಂದೆ ಮಾತನಾಡಿದ್ದು, “ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಆರು ಜನ ಕಾಮ್ರೇಡ್‌ಗಳು ಮುಖ್ಯವಾಹಿನಿಗೆ ಬರಬೇಕು ಎಂದುಕೊಂಡಿದ್ದೇವೆ. ಸಕಾರಾತ್ಮಕವಾಗಿ ಯೋಚಿಸಿ ನಿರ್ಧಾರ ಮಾಡಿದ್ದೇವೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ನಾವು ಒಂದು ಕಡೆ ಸೇರಿ ಚರ್ಚಿಸಿದ್ದೇವೆ. ಈಗ ಎರಡನೇ ಹಂತದಲ್ಲಿ ಮುಖ್ಯವಾಹಿನಿಗೆ ಬರಲು ಉತ್ಸುಕರಾಗಿದ್ದೇವೆ. ಎರಡು ಸಮತಿಯವರು ನಮ್ಮನ್ನು ಬಂದು ಭೇಟಿಯಾಗಿದ್ದಾರೆ. ಸರ್ಕಾರದ ನಿರ್ಧಾರಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಸಮಿತಿಯವರ ಮಾತುಗಳ ನಮಗೆ ಖುಷಿ ತಂದಿವೆ. ನಾವೆಲ್ಲ ಕಾಮ್ರೇಡ್‌ಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸುತ್ತದೆ ಎಂಬ ಭರವಸೆ ನಮಗಿದೆ. ಸಮಿತಿಯ ಸದಸ್ಯರು ಸಾಕಷ್ಟು ಶ್ರಮ ಹಾಕಿ ನಮ್ಮನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಿದ್ದಾರೆ. ಅವರ ಮಾತಿಗೆ ಬೆಲೆ ಕೊಡುತ್ತೇವೆ. ಪ್ರಜಾತಾಂತ್ರಿಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಹೋರಾಟ ಮುಂದುವರಿಯುತ್ತದೆ. ಜನರ ಪರವಾಗಿ ನಾವು ಕೊನೆ ತನಕ ನಿಲ್ಲುತ್ತೇವೆ. ಈ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ನಮ್ಮ ಉಸಿರು ಇರೋವರೆಗೂ ನಮ್ಮ ಹೋರಾಟ ಇರಲಿದೆ” ಎಂದು ಮುಂಡಗಾರು ಲತಾ ಸ್ಪಷ್ಟಪಡಿಸಿದ್ದಾರೆ.

ಶರಣಾಗುವ ನಕ್ಸಲರು ಯಾರು?

  1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
  2. ವನಜಾಕ್ಷಿ (ಬಾಳೆಹೊಳೆ ಕಳಸ)
  3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
  4. ಮಾರಪ್ಪ ಅರೋಳಿ (ಕರ್ನಾಟಕ)
  5. ವಸಂತ ಟಿ (ತಮಿಳುನಾಡು)
  6. ಎನ್. ಜೀಶಾ (ಕೇರಳ)
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X