ಮಳೆಗಿಲ್ಲ ಬಿಡುವು; ಚಾರ್ಮಾಡಿ, ಶಿರಾಡಿ ಘಾಟ್‌ನಲ್ಲಿ ಹೆಚ್ಚಿದ ಗುಡ್ಡ ಕುಸಿತದ ಭೀತಿ

Date:

ನಿರಂತರ ಸುರಿಯುತ್ತಿರುವ ಮಳೆಯಿಂದ ಮಡಿಕೇರಿಯಲ್ಲಿ ಮೈಸೂರು-ಮಂಗಳೂರು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಇತ್ತ ಸಕಲೇಶಪುರದ ಶಿರಾಡಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

- Advertisement -
ಮಡಿಕೇರಿ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್ ಮೂಲಕ ಹಾದುಹೋಗುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಪ್ಪಳ್ಳಿ ಬಳಿ ಗುಡ್ಡ ಕುಸಿತ ಉಂಟಾಗಿದೆ. ಜೆಸಿಬಿಯಿಂದ ಮಣ್ಣು ತೆರವುಗೊಳಿಸಲಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಎಚ್ಚರ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಗುಡ್ಡ ಕುಸಿತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. “ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಬೇಸಿಗೆಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಬದಲು ಮಳೆಗಾಲದಲ್ಲಿ ಕೆಲಸಕ್ಕೆ ವೇಗ ನೀಡುವುದು ಅನಾಹುತಕ್ಕೆ ಕಾರಣ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಸಂಸದ ಶ್ರೇಯಸ್ ಪಾಟೀಲ್, “ಈಗಾಗಲೇ ಸ್ಥಳ ಅಧ್ಯಯನ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ. ವಾಹನ ಸಂಚಾರಕ್ಕೆ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತದೆ. ಶಿರಾಡಿ ಘಾಟ್ ಆನೆಮಹಲ್ ಬಳಿ ಗುಡ್ಡ ಕುಸಿತ ಪ್ರದೇಶಕ್ಕೆ ಹೊಂದಿಕೊಂಡ ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ಶಿರಾಡಿ ಘಾಟ್ ರಸ್ತೆ ತಡಗೋಡೆಗಳ ಕಳಪೆ ಕಾಮಗಾರಿ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು” ಎಂದಿದ್ದಾರೆ.

ಚಿಕ್ಕಮಗಳೂರು ಮೂಡಿಗೆರೆ

ಕಾಫಿನಾಡು ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟ ಹೆಚ್ಚಿದ್ದು, ಮೂಡಿಗೆರೆಯ ದೇವನಗೂಲ್ ಗ್ರಾಮದಲ್ಲಿ ಇಂದಿರಮ್ಮ ಎಂಬುವರ ಮನೆ ಸಮೀಪದಲ್ಲಿ ಗುಡ್ಡ ಕುಸಿದಿದೆ. ಚಾರ್ಮಾಡಿ ಘಾಟ್ ಸುತ್ತಲಿನ ಪ್ರದೇಶಗಳಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಗುಡ್ಡ ಕುಸಿತದ ಭೀತಿಯನ್ನು ಹೆಚ್ಚಿಸಿದೆ. ಮೂಡಿಗೆರೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಜನವರಿಯಿಂದ ಈವರೆಗೂ ಸುಮಾರು 70 ಇಂಚು ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...

ಆಪ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ಡಿಸಿಎಂ ಪರ್ವೇಶ್ ವರ್ಮಾ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ...