ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

Date:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು ಬಂದ್ ಆಚರಿಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿರುವ ಈ ಬಂದ್‌ಗೆ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ.

- Advertisement -

ಬಂದ್‌ನಿಂದಾಗಿ ಪಟ್ಟಣದ ಅಂಗಡಿ-ಮಾರುಕಟ್ಟೆಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಮುಚ್ಚಿವೆ. ಸಾರ್ವಜನಿಕ ಸಾರಿಗೆ ಸೇರಿದಂತೆ ಬಸ್, ಲಾರಿ, ಆಟೋಗಳ ಸಂಚಾರದಲ್ಲಿ ವ್ಯತ್ಯವಾಗಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್, ಹಾಲು ಮಳಿಗೆಗಳಂತಹ ಅಗತ್ಯ ಸೇವೆಗಳು ಸರಾಗವಾಗಿ ಸಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರೈತರು ಮತ್ತು ಸ್ಥಳೀಯ ಸಂಘಟನೆಗಳು ಕಸ್ತೂರಿರಂಗನ್ ವರದಿ ಜಾರಿಯಾದರೆ ಕೃಷಿ, ತೋಟಗಾರಿಕೆ ಮತ್ತು ಸ್ಥಳೀಯರ ಜೀವನೋಪಾಯಕ್ಕೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆತಂಕಗೊಂಡಿದ್ದು, ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯಿಂದ ಮಲೆನಾಡಿನ ಹಲವು ಗ್ರಾಮಗಳು ಪ್ರಭಾವಿತವಾಗಲಿವೆ ಎಂಬುದು ಅವರ ಪ್ರಮುಖ ಆಕ್ಷೇಪ.

ಇದೇ ವೇಳೆ ರಾಜ್ಯ ವಿಧಾನಮಂಡಲದಲ್ಲಿ ಕಸ್ತೂರಿರಂಗನ್ ವರದಿ ಮತ್ತು ಬರಗಾಲ ಸಮಸ್ಯೆ ಕುರಿತು ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ರಾಜ್ಯ ಸರ್ಕಾರ ಸೆಪ್ಟೆಂಬರ್ 27ರೊಳಗೆ ಕೇಂದ್ರಕ್ಕೆ ತನ್ನ ನಿಲುವು ತಿಳಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...