ಕಾಡಾನೆಗಳನ್ನು ಬೇಲೂರಿಗೆ ವಾಪಸ್ ಕಳುಹಿಸದಿದ್ದರೆ ರಾಜೀನಾಮೆ: ನಯನಾ ಮೋಟಮ್ಮ

Date:

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಭದ್ರಾ (ಮುತ್ತೋಡಿ) ಅಭಯಾರಣ್ಯದತ್ತ ಅಟ್ಟುತ್ತಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಆನೆಗಳನ್ನು ಮರಳಿ ಅವುಗಳ ಮೂಲಸ್ಥಾನವಾದ ಬೇಲೂರು ಭಾಗಕ್ಕೆ ಕಳುಹಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಭಾನುವಾರ ಚಿಕ್ಕಮಗಳೂರಿನಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಿದ್ಧಪಡಿಸಿಕೊಂಡು ಬಂದಿದ್ದ ರಾಜೀನಾಮೆ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸುವ ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಹಾಸನ ಜಿಲ್ಲೆಯ ಬೇಲೂರು ಹಾಗೂ ಸಕಲೇಶಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಆನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಆನೆಗಳನ್ನು ಸೆರೆಹಿಡಿಯುವ ಮತ್ತು ಅವುಗಳನ್ನು ಬೇರೆಡೆಗೆ ಓಡಿಸುವ ಕಾರ್ಯಾಚರಣೆ ಆರಂಭಿಸಿದೆ. ಈ ಕಾರ್ಯಾಚರಣೆಯ ಭಾಗವಾಗಿ ಕಾಡಾನೆಗಳನ್ನು ಭದ್ರಾ ಅಭಯಾರಣ್ಯದತ್ತ ಅಟ್ಟಲಾಗುತ್ತಿದೆ. ಆದರೆ, ಈ ನಿರ್ಧಾರವನ್ನು ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಕಾರ್ಯಾಚರಣೆ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ.

ನಮ್ಮ ಗಮನಕ್ಕೆ ತರದೆ ಕಾರ್ಯಾಚರಣೆ:

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಯನಾ ಮೋಟಮ್ಮ, ಕಾಡಾನೆಗಳನ್ನು ನಮ್ಮ ಕ್ಷೇತ್ರದ ಕಡೆಗೆ ಓಡಿಸಬಾರದು ಎಂದು ಈಗಾಗಲೇ ಅರಣ್ಯ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ. ನವೆಂಬರ್ 25ರಂದು ಅರಣ್ಯ ಸಚಿವರ ನೇತೃತ್ವದಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಸಭೆಯಲ್ಲಿ ಚರ್ಚಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಬೇಕಿತ್ತು. ಆದರೆ, ನಮ್ಮ ಗಮನಕ್ಕೆ ತರದೆ ಏಕಾಏಕಿ ಆನೆಗಳನ್ನು ಮೂಡಿಗೆರೆ ಭಾಗಕ್ಕೆ ಓಡಿಸಲಾಗಿದೆ ಎಂದು ಆಕ್ಷೇಪಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಪಿಸಿಸಿಎಫ್ ಹಾಗೂ ಎಸಿಸಿಎಫ್ ಅವರ ಗಮನಕ್ಕೂ ಈ ವಿಚಾರವನ್ನು ತಂದಿದ್ದೇನೆ. ಕಾರ್ಯಾಚರಣೆ ನಿಲ್ಲಿಸುವಂತೆ ತಿಳಿಸಿದ್ದರೂ ನಮ್ಮ ವಿರೋಧವನ್ನು ಪರಿಗಣಿಸದೆ ಆನೆಗಳನ್ನು ಓಡಿಸಿರುವುದು ಸರಿಯಲ್ಲ. ಆನೆಗಳನ್ನು ಅವು ಬಂದಿರುವ ಸ್ಥಳಕ್ಕೆ ಮರಳಿಸಬೇಕು. ಇಲ್ಲದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಎಚ್ಚರಿಸಿದರು.

“ನಾನು ಸರ್ಕಾರಕ್ಕೆ ಉತ್ತರ ಕೊಡಬೇಕಿಲ್ಲ, ಜನರಿಗೆ ಉತ್ತರ ಕೊಡಬೇಕು. ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ. ನಮ್ಮಿಂದ ಸರ್ಕಾರ, ಸರ್ಕಾರದಿಂದ ನಾವಲ್ಲ. ಜನರ ಜೀವಕ್ಕಿಂತ ಅಧಿಕಾರ ಮುಖ್ಯವಲ್ಲ. ನನಗೆ ಸರ್ಕಾರಕ್ಕಿಂತ ಜನರೇ ಮುಖ್ಯ” ಎಂದು ಹೇಳಿದ ಅವರು, ರಾಜೀನಾಮೆ ಪತ್ರ ಪ್ರದರ್ಶಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಮುತ್ತೋಡಿಯಲ್ಲಿ ಈಗಾಗಲೇ ಸಾಕಷ್ಟು ಆನೆಗಳಿವೆ:

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಮಲೆನಾಡಿನ ಮೂಡಿಗೆರೆ, ಶೃಂಗೇರಿ ಹಾಗೂ ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಮಾನವ-ವನ್ಯಜೀವಿ ಸಂಘರ್ಷ ತೀವ್ರವಾಗಿದೆ. ಕಾಡಾನೆಗಳ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ 13 ಮಂದಿ ಹಾಗೂ ಮೂಡಿಗೆರೆ ಕ್ಷೇತ್ರದಲ್ಲಿ ಮೂವರು ಮೃತಪಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಸನ ಭಾಗದ ಕಾಡಾನೆಗಳನ್ನು ಮತ್ತೆ ನಮ್ಮ ಭಾಗಕ್ಕೆ ಓಡಿಸುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಹೇಳಿದರು.

ಭದ್ರಾ ಅಭಯಾರಣ್ಯ ಸುಮಾರು 492 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿದೆ. ಅಲ್ಲಿ ಈಗಾಗಲೇ ಸಾಕಷ್ಟು ವನ್ಯಜೀವಿಗಳಿವೆ. ಮುತ್ತೋಡಿ ಭಾಗದಲ್ಲಿ 450ಕ್ಕೂ ಹೆಚ್ಚು ಆನೆಗಳಿವೆ ಎಂಬ ಮಾಹಿತಿ ಇದೆ. ಹೀಗಿರುವಾಗ ಮತ್ತಷ್ಟು ಆನೆಗಳನ್ನು ಇಲ್ಲಿಗೆ ತರುವ ಅಗತ್ಯವೇನಿದೆ? ಬೇರೆ ಅರಣ್ಯ ಪ್ರದೇಶಗಳ ಸಾಧ್ಯತೆಯನ್ನೂ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಕಾರಣಕ್ಕೂ ಹೊರಗಿನಿಂದ ಕಾಡಾನೆಗಳನ್ನು ನಮ್ಮ ಭಾಗಕ್ಕೆ ಬಲವಂತವಾಗಿ ಸ್ಥಳಾಂತರಿಸುವುದನ್ನು ಒಪ್ಪುವುದಿಲ್ಲ. ಅರಣ್ಯ ಸಚಿವರು ಕಾರ್ಯಾಚರಣೆ ನಿಲ್ಲಿಸುವ ಭರವಸೆ ನೀಡಿದ್ದಾರೆ. ಆದರೂ ಆನೆಗಳನ್ನು ಇಲ್ಲಿಗೆ ಓಡಿಸುವ ಕ್ರಮ ಮುಂದುವರಿದರೆ ಜನರ ಹಿತಕ್ಕಾಗಿ ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.

ಜನರ ಜೀವಕ್ಕೆ ಬೆಲೆ ಕೊಡಬೇಕು:

ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿರಂತರವಾಗಿ ಹೆಚ್ಚುತ್ತಿದೆ. ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಹಲವು ಬಾರಿ ಅಧಿಕಾರಿಗಳ ಸಭೆಗಳಲ್ಲಿ ಒತ್ತಾಯಿಸಿದ್ದೇವೆ. ಆದರೆ, ಈಗ ಹಾಸನ ಭಾಗದ ಆನೆಗಳನ್ನು ನಮ್ಮ ಜಿಲ್ಲೆಯತ್ತ ಓಡಿಸುತ್ತಿರುವುದು ಸರಿಯಲ್ಲ ಎಂದರು.

ಹಾಸನ ಭಾಗದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂಬ ಕಾರಣಕ್ಕೆ ಅಲ್ಲಿನ ಸಮಸ್ಯೆಯನ್ನು ಚಿಕ್ಕಮಗಳೂರು ಜಿಲ್ಲೆಯ ಜನರ ಮೇಲೆ ಹೇರುವುದು ನ್ಯಾಯಸಮ್ಮತವಲ್ಲ. ಒಂದು ಜಿಲ್ಲೆಯ ಜನರ ಜೀವಕ್ಕೆ ಮಾತ್ರ ಬೆಲೆಯಿದ್ದು, ಮತ್ತೊಂದು ಜಿಲ್ಲೆಯ ಜನರ ಜೀವಕ್ಕೆ ಬೆಲೆಯಿಲ್ಲವೇ? ಆನೆಗಳನ್ನು ವಾಪಸ್ ಕಳುಹಿಸಬೇಕು. ಇಲ್ಲದಿದ್ದರೆ ಮೂವರು ಶಾಸಕರೂ ಒಗ್ಗಟ್ಟಾಗಿ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

ಹಾಸನ ಉಸ್ತುವಾರಿ ಸಚಿವರ ಸಮರ್ಥನೆ:

ಇನ್ನೊಂದೆಡೆ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಆನೆಗಳನ್ನು ಭದ್ರಾ ಅಭಯಾರಣ್ಯದತ್ತ ಓಡಿಸುವ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಬೇಲೂರು ಭಾಗದಲ್ಲಿ ಆನೆಗಳು ನೆಲೆಸಲು ಸೂಕ್ತವಾದ ಅರಣ್ಯ ಪ್ರದೇಶದ ಕೊರತೆಯಿದ್ದು, ಭದ್ರಾ ಅಭಯಾರಣ್ಯದಲ್ಲಿ ಸಾಕಷ್ಟು ಅರಣ್ಯ ಪ್ರದೇಶವಿದೆ. ಆನೆಗಳನ್ನು ಕಾಡಿನೊಳಗೆ ಕಳುಹಿಸುವ ಉದ್ದೇಶದಿಂದಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಯಾವುದೇ ಜಿಲ್ಲೆಯ ಜನರಿಗೆ ತೊಂದರೆ ನೀಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸದೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ ಸಂಕಟ: ನೀರಿಲ್ಲದ ಕಾಡು-ಆಹಾರವಿಲ್ಲದ ವನ್ಯಜೀವಿ!

ಈ ನಡುವೆ, ಅರಣ್ಯ ಸಚಿವರ ನೇತೃತ್ವದಲ್ಲಿ ನವೆಂಬರ್ 25ರಂದು ಸಭೆ ನಡೆಸುವ ಪ್ರಸ್ತಾಪವೂ ಇದ್ದು, ಆನೆಗಳ ಸ್ಥಳಾಂತರ ವಿಚಾರದಲ್ಲಿ ಉಂಟಾಗಿರುವ ಗೊಂದಲಕ್ಕೆ ಸರ್ಕಾರ ಯಾವ ರೀತಿಯ ಪರಿಹಾರ ಕಂಡುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಒಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆರಂಭವಾದ ಕಾರ್ಯಾಚರಣೆ ಇದೀಗ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜನಪ್ರತಿನಿಧಿಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಕಾಡಾನೆಗಳ ಸಂರಕ್ಷಣೆ, ಜನರ ಜೀವ ರಕ್ಷಣೆ ಹಾಗೂ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ಮುಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....