ಶೃಂಗೇರಿ | ತುಂಗಾ ನದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ಕಂಟಕ: ಮಾಲಿನ್ಯ ತಡೆಯಲು ಸ್ಥಳೀಯರ ಮನವಿ

Date:

ಶೃಂಗೇರಿಯಲ್ಲಿ ನಿರಂತರ ಮಳೆಯ ಬೆನ್ನಲ್ಲೇ, ಮಳೆ ನೀರಿನಲ್ಲಿ ತೇಲಿಬಂದ ಪ್ಲಾಸ್ಟಿಕ್‌ ತ್ಯಾಜ್ಯ ತುಂಗಾ ನದಿಯ ದಡದಲ್ಲಿ ರಾಶಿ ರಾಶಿಯಾಗಿ ತುಂಬಿಕೊಂಡಿದೆ. ಇದರಿಂದ ನದಿಯೊಡಲಿನ ಜಲಚರಗಳು ಮತ್ತು ಸ್ಥಳೀಯರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚಿಗೆ ಸುರಿದ ಮಳೆಯ ಜೊತೆಗೆ ಸುತ್ತಮುತ್ತಲಿನ ಪ್ರದೇಶಗಳಿಂದ ಹರಿದು ಬಂದ ಪ್ಲಾಸ್ಟಿಕ್‌ ಬಾಟಲ್‌ಗಳು, ಪ್ಯಾಕೇಜಿಂಗ್ ವಸ್ತುಗಳು ಮತ್ತು ಇತರ ತ್ಯಾಜ್ಯಗಳು ನದಿ ದಡದಲ್ಲಿ ಸಂಗ್ರಹವಾಗಿವೆ. ಇದು ನದಿ ನೀರಿನ ಗುಣಮಟ್ಟ ಕೆಡಿಸಿ, ಮೀನುಗಳು ಸೇರಿದಂತೆ ಇತರೆ ಜಲಚರಗಳ ಜೀವಕ್ಕೆ ಅಪಾಯ ತಂದೊಡ್ಡುತ್ತದೆ. ನದಿ ತೀರದ ನಿವಾಸಿಗರು ತೊಂದರೆ ಅನುಭವಿಸುತ್ತಿದ್ದು, ನದಿ ಮಾಲಿನ್ಯದಿಂದ ಆರೋಗ್ಯ ಹಾನಿ ಸಂಭವಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು, ಪಟ್ಟಣ ಪಂಚಾಯತಿ ಹಾಗೂ ಜಿಲ್ಲಾಡಳಿತವು ಕೂಡಲೇ ಎಚ್ಚೆತ್ತುಕೊಂಡು ತ್ಯಾಜ್ಯ ತೆರವುಗೊಳಿಸಲು ಮುಂದಾಗಬೇಕು ಮತ್ತು ನದಿಗೆ ಕಸ ಸೇರದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಪ್ಲಾಸ್ಟಿಕ್‌ ತ್ಯಾಜ್ಯ ನದಿ ಸೇರದಂತೆ ತಡೆಯುವುದು ಮತ್ತು ನಿಯಮಿತವಾಗಿ ಸ್ವಚ್ಛತಾ ಕಾರ್ಯಾಗಾರಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಅವರು ಸ್ಥಳೀಯರು ಅಭಿಪ್ರಾಯಿಸಿದ್ದಾರೆ.

ಶೃಂಗೇರಿ ಪ್ರದೇಶದಲ್ಲಿ ತುಂಗಾ ನದಿ ದಡದಲ್ಲಿ ತ್ಯಾಜ್ಯ ಸಂಗ್ರಹವಾಗುವ ಸಮಸ್ಯೆ ಹಿಂದೆಯೂ ವರದಿಯಾಗಿದ್ದು, ಮಳೆಗಾಲದಲ್ಲಿ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳುತ್ತಿದೆ. ಪರಿಸರವಾದಿಗಳು ಮತ್ತು ಸ್ಥಳೀಯರು ನದಿಯನ್ನು ಸ್ವಚ್ಛವಾಗಿ ಕಾಪಾಡುವಂತೆ ಆಡಳಿತಕ್ಕೆ ಮನವಿ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ...

ಉಡುಪಿ | ಶಿಕ್ಷಣ, ಹೋರಾಟ, ಸಂಘಟನೆ ಸಮಾಜದ ಪ್ರಗತಿಗೆ ಮುಖ್ಯ: ಸಚಿವ ಶಿವರಾಜ ತಂಗಡಗಿ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ...