ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ–ಶೃಂಗೇರಿ ಮಾರ್ಗದಲ್ಲಿ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ ಆರೋಪಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥಸ್ವಾಮಿ (65) ಎಂಬಾತ, ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುವ ವೇಳೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಭೀತಳಾದ ಬಾಲಕಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಜಿಗಿದಿದ್ದಾಳೆ. ಪರಿಣಾಮ ಗಾಯಗೊಂಡು ರಸ್ತೆಯಲ್ಲಿ ಬಿದ್ದ ಬಾಲಕಿಯ ಕಾಲಿನ ಮೇಲೆಯೇ ಆರೋಪಿ ಕಾರು ಹತ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಸ್ತೆ ತಡೆದು ಪ್ರತಿಭಟನೆ: ಶೃಂಗೇರಿ ಕ್ಷೇತ್ರ ಒಕ್ಕೂಟ
ಈ ಘಟನೆ ಕುರಿತು ದೂರು ದಾಖಲಾಗಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.



