ಶೃಂಗೇರಿ ಅಂಚೆ ಮತ ಮರು ಎಣಿಕೆ: ರಾಜೇಗೌಡ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

Date:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ ಡಿ ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಈ ಅರ್ಜಿಯನ್ನು ಮೇ 11ರಂದು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಒಪ್ಪಿಗೆ ನೀಡಿದೆ.

- Advertisement -

ಕಳೆದ ಶನಿವಾರ ನಡೆದ ಈ ಮರು ಎಣಿಕೆಯ ಪ್ರಕ್ರಿಯೆಯಲ್ಲಿ ರಾಜೇಗೌಡ ಅವರ ಕೆಲವು ಮತಗಳು ಅಸಿಂಧುಗೊಂಡಿದ್ದರಿಂದ, ಜೀವರಾಜ್ ಅವರು 52 ಮತಗಳ ಮುನ್ನಡೆ ಸಾಧಿಸಿ ವಿಜಯಿ ಎಂದು ಘೋಷಿತರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಬೆಳವಣಿಗೆಯಿಂದ ರಾಜೇಗೌಡ ಅವರ ಶಾಸಕ ಸ್ಥಾನಕ್ಕೆ ಧಕ್ಕೆ ಉಂಟಾಗಿದ್ದು, ಹೈಕೋರ್ಟ್ ಆದೇಶದಲ್ಲಿ ಲೋಪವಿದೆ ಎಂದು ಅವರು ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಏಪ್ರಿಲ್ 6ರ ಆದೇಶವನ್ನು ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದರು.

ರಾಜೇಗೌಡ ಪರ ಹಾಜರಾದ ಹಿರಿಯ ವಕೀಲ ದೇವದತ್ತ ಕಾಮತ್, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿ, ಮೇ 11ಕ್ಕೆ ಈ ವಿಷಯವನ್ನು ತುರ್ತಾಗಿ ಪಟ್ಟಿ ಮಾಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

“ಮರು ಎಣಿಕೆಗೆ ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ, ಇದರ ಪರಿಣಾಮವಾಗಿ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರನ್ನು ಶೃಂಗೇರಿಯ ಶಾಸಕರಾಗಿ ಆಯ್ಕೆ ಮಾಡಲಾಗಿದೆ” ಎಂದು ಕಾಮತ್ ವಾದಿಸಿದರು.

ಈ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆ ಕೋರಿಕೆಯನ್ನು ಪರಿಗಣಿಸುವುದಾಗಿ ಪೀಠ ಹೇಳಿದ್ದು, “ಸಾಮಾನ್ಯವಾಗಿ, ನಾವು ಅಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ… ಆದರೆ ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ” ಎಂದು ಹೇಳಿದೆ.

2023ರ ಚುನಾವಣೆಯಲ್ಲಿ ರಾಜೇಗೌಡ ಅವರು ಡಿ ಎನ್‌ ಜೀವರಾಜ್ ಅವರ ವಿರುದ್ಧ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ, ಜೀವರಾಜ್ ಅವರು ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ತಿರಸ್ಕೃತಗೊಂಡಿದ್ದ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ ಎಣಿಕೆ ಮಾಡುವಂತೆ ಸೂಚಿಸಿತ್ತು.

ಆದಾಗ್ಯೂ, ಜೀವರಾಜ್ ಸಲ್ಲಿಸಿದ್ದ ಚುನಾವಣಾ ಅರ್ಜಿಯ ಮೇರೆಗೆ ವಿಚಾರಣೆ ನಡೆಸಿದ ಹೈಕೋರ್ಟ್, ಏಪ್ರಿಲ್ 6ರಂದು ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶನ ನೀಡಿತ್ತು. ಆದರೆ, ಮರುಎಣಿಕೆ ಕಾರ್ಯದಲ್ಲಿ ಫಲಿತಾಂಶ ಬದಲಾಗಿದ್ದು, ಜೀವರಾಜ್ ಅವರ ಅಂಚೆ ಮತಗಳ ಸಂಖ್ಯೆ 692 ರಿಂದ 690ಕ್ಕೆ ಸ್ವಲ್ಪ ಕಡಿಮೆಯಾಯಿತು. ರಾಜೇಗೌಡ ಅವರ ಮತಗಳ ಸಂಖ್ಯೆ 569 ರಿಂದ 314ಕ್ಕೆ ತೀವ್ರವಾಗಿ ಕುಸಿಯಿತು. ಇದರ ಪರಿಣಾಮವಾಗಿ ಅವರ ಪರವಾಗಿ ನಿವ್ವಳ 255 ಮತಗಳು ಕಡಿಮೆಯಾದವು.

ಇದನ್ನು ಓದಿದ್ದೀರಾ? ಅಡುಗೆ ಮನೆಗೆ ಕನ್ನ ಹಾಕಿದ ಕೇಂದ್ರ ಸರ್ಕಾರ: ‘ನಾರಿ ಶಕ್ತಿʼಯನ್ನು ಮಾತಲ್ಲ, ಬೆಲೆ ಇಳಿಕೆಯಲ್ಲಿ ತೋರಿಸಲಿ

ಈ ಹಿನ್ನೆಲೆಯಲ್ಲಿ ಜೀವರಾಜ್ ಅವರನ್ನು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 66ರ ಅಡಿಯಲ್ಲಿ ಚುನಾಯಿತರೆಂದು ಚುನಾವಣಾಧಿಕಾರಿ ಘೋಷಿಸಿದರು. ಇದರ ಪರಿಣಾಮವಾಗಿ ವಿಧಾನಸಭೆಗೆ ಪ್ರವೇಶಿಸಿದ ಸುಮಾರು ಮೂರು ವರ್ಷಗಳ ನಂತರ ಹಾಲಿ ಕಾಂಗ್ರೆಸ್ ಶಾಸಕರ ರಾಜೇಗೌಡರನ್ನು ಪದಚ್ಯುತಗೊಳಿಸಲಾಯಿತು.

ಮೇ 11ರ ಸೋಮವಾರ ನಡೆಯಲಿರುವ ಈ ವಿಚಾರಣೆಯು ಶೃಂಗೇರಿ ಕ್ಷೇತ್ರದ ಶಾಸಕರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಅಂತಿಮ ತೆರೆ ಎಳೆಯುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...