ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

Date:

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ ಸಂಪರ್ಕ ರಸ್ತೆಯ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ, ದಿವಂಗತ ಶೇಷೇಗೌಡರ ಕುಟುಂಬಸ್ಥರು ಸೇರಿ ಹೋರನಾಡು– ಮೇಣಸಿನಹಾಡ್ಯ–ಶೃಂಗೇರಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ 

- Advertisement -

ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರಾಗಿದ್ದು, ಕಳೆದ ಏಪ್ರಿಲ್‌ನಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಗುತ್ತಿಗೆದಾರರು ಕೇವಲ ಪಿಲ್ಲರ್‌ಗಳನ್ನು ನಿರ್ಮಿಸಿ ಕಾಮಗಾರಿಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಮಳೆಗಾಲದಲ್ಲಿ ಹೊರಿಕೊಂಡ ಭಾಗದ ಹಲವು ಕುಟುಂಬಗಳ ಸಂಚಾರ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಆತಂಕ ಎದುರಾಗಿದೆ ಎಂದು ಮೇಣಸಿನಹಾಡ್ಯ ಗ್ರಾಮಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದೇ ಕುಟುಂಬಕ್ಕೆ ಸೇರಿದ ಐತಿಹಾಸಿಕ ಅಷ್ಟರೂಢ ಪಾರ್ವತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದರೆ, ಸೇತುವೆ ನಿರ್ಮಾಣ ಪೂರ್ಣಗೊಳ್ಳದ ಕಾರಣ ದೇವಸ್ಥಾನದ ಕಾಮಗಾರಿಗೆ ಅಗತ್ಯವಿರುವ ಕಟ್ಟಡ ಸಾಮಗ್ರಿಗಳನ್ನು ಸಾಗಿಸಲು ತೀವ್ರ ತೊಂದರೆಯಾಗುತ್ತಿದೆ. ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸಚಿವ ಯತೀಂದ್ರ ಸಿದ್ದರಾಮಯ್ಯ ರಾಜಮನೆತನಕ್ಕೆ ಅವಹೇಳನಕಾರಿ ಹೇಳಿಕೆ; ಅರಸು ಸಂಘ ಖಂಡನೆ 

ಈ ಘಟನೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಕೊಪ್ಪ ತಹಶೀಲ್ದಾರ್ ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಮತ್ತು ಬಾಕಿ ಉಳಿದಿರುವ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕರಾರು ಒತ್ತಾಯಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರಾಜಕೀಯದಲ್ಲಿ ಯುವಜನರ ಪಾತ್ರ ಬಹುಮುಖ್ಯ: ಹೆಚ್.ಡಿ ತಮ್ಮಯ್ಯ

ಆಧುನಿಕ ಯುಗದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ...

ಚಿಕ್ಕಮಗಳೂರು | ಲಕ್ಷಾಂತರ ಮೌಲ್ಯದ ಆಭರಣ, ನಗದು ಕಳ್ಳತನ

ನಗರದ ಕಲ್ಯಾಣ್‌ ನಗರದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಕೈಚಳಕ...

ಕೋಲಾರ : ವರ್ತೂರು ಪ್ರಕಾಶ್ ಹೇಳಿಕೆಗೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಸಮಾಧಾನ

ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ...

ವಿಜಯಪುರ | ನ.12ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಯುವಜನರಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆ ಹಾಗೂ ಕಲಾತ್ಮಕ ಅಭಿವ್ಯಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ...