ತರೀಕೆರೆ | ಸ್ನೇಹಿತೆ ಮನೆಬಿಟ್ಟು ಹೋಗಿದ್ದಕ್ಕೆ ಆಕೆಯ ಅಪ್ಪನಿಂದ ಬೈಗುಳ: ಮನನೊಂದ ಯುವಕ ಆತ್ಮಹತ್ಯೆ

Date:

ಯುವತಿಯೊಬ್ಬಳು ಮನೆ ಬಿಟ್ಟು ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ತೆರಳಿದ್ದ ಘಟನೆಗೆ ಸಂಬಂಧಿಸಿದಂತೆ, ಆಕೆಯ ಸ್ನೇಹಿತ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.

- Advertisement -

ಮೃತಪಟ್ಟ ಯುವಕನನ್ನು ಕುಡ್ಲೂರು ಗ್ರಾಮದ ಚಂದನ್(20) ಎಂದು ಗುರುತಿಸಲಾಗಿದೆ. ಗ್ರಾಮದ 18 ವರ್ಷದ ಯುವತಿಯೊಬ್ಬಳು ಜೂನ್ 14ರಂದು ಪತ್ರ ಬರೆದಿಟ್ಟು ಮನೆಯಿಂದ ಹೊರಟಿದ್ದಳು. ಈ ಹಿನ್ನೆಲೆಯಲ್ಲಿ ಯುವತಿಯ ತಂದೆ ಆಕೆಯ ಸ್ನೇಹಿತ ಚಂದನ್‌ನನ್ನು ಕರೆದು ʼಆಕೆ ಮನೆ ಬಿಟ್ಟು ಹೋಗಲು ನೀನೇ ಕಾರಣ, ಆಕೆ ಎಲ್ಲಿದ್ದಾಳೆ ಎಂಬ ಮಾಹಿತಿ ನಿನಗೆ ಗೊತ್ತಿದೆ” ಎಂದು ಆರೋಪಿಸಿ, ಗದರಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಯುವತಿ ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗುತ್ತಿದ್ದಂತೆ, ಮೊಬೈಲ್ ಕರೆ ವಿವರಗಳ ಆಧಾರದ ಮೇಲೆ ಕಡೂರು ತಾಲೂಕಿನ ಬೀರೂರು ಪೊಲೀಸರು ಚಂದನ್‌ನನ್ನು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಆತನನ್ನು ಮನೆಗೆ ಕಳುಹಿಸಿದ್ದರು. ಆದರೆ, ಜೂನ್ 21ರ ಸಂಜೆ ವಿಚಾರಣೆ ಮುಗಿಸಿಕೊಂಡು ಮನೆಗೆ ಮರಳಿದ ಚಂದನ್, ಮಾನಸಿಕವಾಗಿ ನೊಂದ ಸ್ಥಿತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ಸಂದೇಶ ಕಳುಹಿಸಿದ್ದ ಚಂದನ್, ʼಆ ಹುಡುಗಿ ಎಲ್ಲಿದ್ದಾಳೆ ಎಂಬುದು ನನಗೆ ಗೊತ್ತಿಲ್ಲ. ಆಕೆ ಮನೆ ಬಿಟ್ಟು ಹೋಗುವುದಕ್ಕೆ ನಾನೇ ಕಾರಣ ಎನ್ನುವ ಆರೋಪ ಸುಳ್ಳು. ಊರಿನ ಜನರು ನನ್ನನ್ನು ಅನುಮಾನದಿಂದ ನೋಡುತ್ತಿದ್ದಾರೆ. ಅವಳ ತಂದೆಯೂ ತುಂಬಾ ಬೈದಿದ್ದಾರೆ. ನನಗೆ ಬದುಕಲು ಇಷ್ಟವಿಲ್ಲ. ನನ್ನನ್ನು ಕ್ಷಮಿಸಿʼ ಎಂದು ಬರೆದು ಸಂದೇಶ ಕಳುಹಿಸಿದ್ದಾನೆ.

ಇನ್ನೊಂದೆಡೆ, ಮನೆ ಬಿಟ್ಟು ತೆರಳಿದ್ದ ಯುವತಿಯೂ ತನ್ನ ಪತ್ರದಲ್ಲಿ, ʼಚಂದನ್ ನನಗೆ ಅಣ್ಣನಂತೆ, ನನ್ನ ನಿರ್ಧಾರಕ್ಕೂ ಅವನಿಗೂ ಯಾವುದೇ ಸಂಬಂಧವಿಲ್ʼವೆಂದು ಉಲ್ಲೇಖಿಸಿದ್ದಳಾದರೂ ನಿರಂತರ ಆರೋಪ, ಪೊಲೀಸ್ ವಿಚಾರಣೆ ಹಾಗೂ ಸಾಮಾಜಿಕ ಒತ್ತಡದಿಂದ ಮನನೊಂದಿದ್ದ ಚಂದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.‌

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಪೋಕ್ಸೋ; ಶಿಕ್ಷಕನ ಮೇಲೆ ಪ್ರಕರಣ ದಾಖಲು 

“ಹುಡುಗಿ ಅಪ್ಪನ ಕಿರುಕುಳದಿಂದಲೇ ಚಂದನ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅವನ ಸಾವಿಗೆ ನ್ಯಾಯ ಸಿಗಬೇಕು.‌ ಯುವತಿ ಅಪ್ಪನ ಮೇಲೆ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಬೇಕು” ಎಂದು ದಲಿತ ಸಂಘಟನೆಗಳು ಬೀರೂರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆ ಬಿಟ್ಟಿರುವ ಯುವತಿ ಎಲ್ಲಿದ್ದಾಳೆ ಹಾಗೂ ಚಂದನ್ ಸಾವಿಗೆ ನಿಖರ ಕಾರಣವೇನು? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕ ಸತ್ಯ ಹೊರಬರಬೇಕಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...